More

    ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಹೊಸನಗರ: ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ವಿನಾಕಾರಣ ಹಲ್ಲೆ, ಕಿರುಕುಳ, ಕಾಲೇಜಿನಿಂದ ಅಮಾನತು ಮಾಡುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರಾಚಾರ್ಯ ಅಂಜನ್‌ಕುಮಾರ್ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು.

    ಇತ್ತೀಚೆಗೆ ಬೈಕ್ ಅನ್ನು ನೋಪಾರ್ಕಿಂಗ್‌ನಲ್ಲಿ ನಿಲ್ಲಿಸಿದ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದರು. ಮತ್ತೊಮ್ಮೆ ಬೈಕ್‌ನ ಗಾಳಿ ತೆಗೆದಿದ್ದಾರೆ. ಇದನ್ನು ಪ್ರಶ್ನಿಸಿ, ನ್ಯಾಯ ಕೇಳಲು ಹೋದರೆ ಟಿ.ಸಿ. ಕೊಡುತ್ತೇನೆ ಎಂದು ಬೆದರಿಸುತ್ತಾರೆ. ನಮ್ಮ ಭವಿಷ್ಯ ಹಾಳಾಗುತ್ತದೆ ಎಂಬ ಭಯದಿಂದ ಪ್ರಾಚಾರ್ಯರ ಕಿರುಕುಳ ಸಹಿಸಿಕೊಂಡು ವ್ಯಾಸಂಗ ಮಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
    ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವಿಷ್ಣುಮೂರ್ತಿ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಆಲಿಸಿದರು. ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
    ಪ್ರಮುಖರಾದ ಧಾರಿಣಿ, ನಂದನ್, ಪ್ರತಾಪ್ ಇತರರಿದ್ದರು. ಪ್ರತಿಭಟನೆಗೆ ಎಬಿವಿಪಿ, ಕರ್ನಾಟಕ ರಾಷ್ಟ್ರ ಸಮಿತಿ ಪರಿಷತ್ ಬೆಂಬಲ ನೀಡಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts