More

    ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

    ಶಿವಮೊಗ್ಗ: ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಬಿ.ಎಚ್.ರಸ್ತೆಗಿಳಿದು ವಾಹನಗಳನ್ನು ಪ್ರತಿಭಟನೆ ನಡೆಸಿದರು.

    ಎರಡು ತಿಂಗಳಿಂದ ಕಾಲೇಜು ಆರಂಭಗೊಂಡಿದ್ದರೂ ಇನ್ನೂ ತರಗತಿಗಳೇ ಆರಂಭಗೊಂಡಿಲ್ಲ. ಈ ಬಗ್ಗೆ ಹಲವು ಬಾರಿ ಕುವೆಂಪು ವಿವಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕುವೆಂಪು ವಿವಿ ಕುಲಪತಿ ಮತ್ತು ಕುಲಸಚಿವರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು.
    ಕಳೆದ ಸೆ.9ರಿಂದ ಕಾಲೇಜು ಆರಂಭವಾದರೂ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಇದುವರೆಗೂ ಅತಿಥಿ ಉಪನ್ಯಾಸಕರ ನೇಮಕ ಮಾಡಿಲ್ಲ. ಈ ಬಗ್ಗೆ ಕಳೆದ ಗುರುವಾರವೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸ್ಥಳಿಯ ಶಾಸಕರು ಮತ್ತು ಇತರರೂ ನೀಡಿದ್ದ ಆಶ್ವಾಸನೆ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಗಿತ್ತು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಭಟನೆ ನಡೆಸಿದರು.
    ಗ್ರಾಮೀಣ ಪ್ರದೇಶದಿಂದ ಬರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಪ್ರತಿದಿನ 100ರಿಂದ 200 ರೂ. ಖರ್ಚು ಮಾಡಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಆದರೆ ಉಪನ್ಯಾಸಕರಿಲ್ಲದ ಕಾರಣ ಪಾಠ ಪ್ರವಚನಗಳಿಲ್ಲದೆ ವಾಪಾಸ್ ಹೋಗುತ್ತಿದ್ದಾರೆ. ಉಪನ್ಯಾಸಕರು ಬಾರದಿದ್ದರೆ ಬರೀ ವಿದ್ಯಾರ್ಥಿಗಳು ಮಾತ್ರವಲ್ಲ ವಿದ್ಯಾರ್ಥಿಗಳ ಪಾಲಕರು ಕೂಡ ಬೀದಿಗಿಳಿಯಲಿದ್ದಾರೆ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts