More

    ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

    ಮದ್ದೂರು: ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ತಾಲೂಕಿನ ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಗ್ರಾಮಸ್ಥರು ಪಟ್ಟಣದ ಸೆಸ್ಕ್ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಕಚೇರಿ ಮುಂದೆ ಜಮಾಯಿಸಿದ ಗ್ರಾಮಸ್ಥರು, ಸಮರ್ಪಕವಾಗಿ ವಿದ್ಯುತ್ ನೀಡದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ಗ್ರಾಮದ ಮುಖಂಡ ಕಾಂತರಾಜು ಮಾತನಾಡಿ, ಹಲವು ದಿನಗಳಿಂದ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡದ ಕಾರಣ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಬೆಳೆಗಳು ಒಣಗುವ ಪರಿಸ್ಥಿತಿ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಈ ಕೂಡಲೇ ರೈತರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ಪ್ರತಿಭಟನಾ ಸ್ಥಳಕ್ಕೆ ಕಾರ್ಯಪಾಲಕ ಸಹಾಯಕ ಇಂಜಿನಿಯರ್ ರಮೇಶ್ ಆಗಮಿಸಿ ಪ್ರತಿಭಟನಾಕಾರರ ಜತೆ ಚರ್ಚಿಸಿದಿರು. ಮೂರು ದಿನಗಳಲ್ಲಿ ಸಮರ್ಪಕವಾಗಿ ವಿದ್ಯುತ್ತು ನೀಡಲಾಗುವುದೆಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

    ಪ್ರತಿಭಟನೆಯಲ್ಲಿ ಬಾಬು, ಸೋಮಶೇಖರ್, ರಾಮಲಿಂಗಯ್ಯ, ಸುಧೀರ್‌ಕುಮಾರ್, ರಾಜೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts