More

    ಹಾಲಿನ ಬೆಲೆ ಹೆಚ್ಚಳಕ್ಕಾಗಿ ಸೆ. 22ರಂದು ವಿಧಾನಸೌಧಕ್ಕೆ ಮುತ್ತಿಗೆ

    ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ ಕನಿಷ್ಠ 5 ರೂ. ಹೆಚ್ಚಿಸುವಂತೆ ಒತ್ತಾಯಿಸಿ ಸೆ.22ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಮುಂದಾಗಿದೆ.

    ಮೂರು ವರ್ಷದಿಂದ ಹಾಲಿನ ದರ ಹೆಚ್ಚಿಸಿಲ್ಲ. ಹಾಲಿನ ದರವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಸಹಕಾರ ಸಚಿವರು ಹಾಗೂ ಕೆಎಂಎಫ್​ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತ ಬರುತ್ತಿದ್ದೇವೆ. ಸ್ವಯಂಪ್ರೇರಿತವಾಗಿ ಹಾಲು ಉತ್ಪಾದಕರು, ರೈತರು ಸರ್ಕಾರಕ್ಕೆ ಸಾವಿರಾರು ಪತ್ರ ಬರೆದು ದರ ಹೆಚ್ಚಿಸುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಎಂದು ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯುವ ರ‌್ಯಾಲಿಯಲ್ಲಿ ಮಂಡ್ಯ, ಮೈಸೂರು, ತುಮಕೂರು, ಕೋಲಾರ, ರಾಮನಗರ, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ 5 ಲಕ್ಷ ರೈತರು ಆಗಮಿಸಲಿದ್ದಾರೆ ಎಂದರು.

    ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts