ಶಿವಮೊಗ್ಗ: ಬಗರ್‌ಹುಕುಂ ರೈತರ ಸಾಗುವಳಿ ಹಕ್ಕು ಮಾನ್ಯ ಮಾಡುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ರೈತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದೆ ಭೂ ಹಕ್ಕುಪತ್ರ ನೀಡಬೇಕು. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಕಾನೂನು ವ್ಯಾಪ್ತಿಗೆ ತಂದು ಖಾತ್ರಿಪಡಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇರುವ ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಒತ್ತಾಯಿಸಿದರು.
ತುಂಗಾ ಡ್ಯಾಂನಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಯನ್ನು ಶೀಘ್ರ ಮುಗಿಸಬೇಕು. ಗ್ರಾಮೀಣ ಪ್ರದೇಶದ ರೈತರ ಆರ್ಥಿಕತೆ ಸುಧಾರಿಸಲು ನಬಾರ್ಡ್ ಮೂಲಕ ಕೋ-ಆಪರೇಟಿವ್ ಸೊಸೈಟಿಗಳಿಗೆ ನೀಡುವಂತಹ ಸಾಲದ ಮೊತ್ತವನ್ನು ಕಡಿತಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್‌ಗಳು ಗ್ರಾಮೀಣ ಪ್ರದೇಶದ ಜನರಿಂದ ಕಾನೂನು ಬಾಹಿರವಾಗಿ ಸಾಲ ವಸೂಲಾತಿ ಕ್ರಮ ಅನುಸರಿಸುತ್ತಿರುವುದು, ಸಾಲ ವಸೂಲಾತಿ ನೆಪದಲ್ಲಿ ಸಿಬ್ಬಂದಿ ನೀಡುತ್ತಿರುವ ಕಿರುಕುಳ ಹಾಗೂ ಗೂಂಡಾಗಿರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಈರಣ್ಣ ಪ್ಯಾಟಿ, ಹಾಲೇಶಪ್ಪ ಗೌಡ, ಯಶವಂತರಾವ್ ಘೋರ್ಪಡೆ, ಡಿ.ವಿ.ವೀರೇಶ್, ಪುಟ್ಟನಗೌಡ, ಮಂಜುನಾಥೇಶ್ವರ, ಮೋಹನ್‌ಕುಮಾರ್, ಜಗದೀಶ್ ನಾಯಕ್, ಎಂ.ಗಿರೀಶ್, ಹಿರಣಯ್ಯ ಪ್ರತಿಭಟನೆಯಲ್ಲಿದ್ದರು.
ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ಕೊಡುವಂತೆ ಒತ್ತಾಯಿಸಿ ಪ್ರತಿಭಟನೆ

You Might Also Like
ಬೇಸಿಗೆಯಲ್ಲಿ ಬಿಸಿ ಕಾಫಿ ಅಥವಾ ಕೋಲ್ಡ್ ಕಾಫಿ, ಯಾವುದು ಆರೋಗ್ಯಕ್ಕೆ ಒಳ್ಳೆಯದು? Hot Coffee OR Cold Coffee
Hot Coffee OR Cold Coffee: ಕಾಫಿ ಪ್ರಪಂಚದಲ್ಲೇ ಅತ್ಯಂತ ಪ್ರಿಯವಾದ ಪಾನೀಯಗಳಲ್ಲಿ ಒಂದಾಗಿದೆ. ಕೆಲವು…
ಶನಿವಾರ ಈ ತಪ್ಪುಗಳನ್ನು ಮಾಡಬೇಡಿ! ಬಡತನವನ್ನು ಆಹ್ವಾನಿಸಿದಂತೆ… Avoid These Mistakes On Saturday
Avoid These Mistakes On Saturday: ಶನಿವಾರದಂದು ಮಾಡುವ ಸಣ್ಣ ತಪ್ಪುಗಳು ಅನೇಕ ರೀತಿಯ ತೊಂದರೆಗಳಿಗೆ…
ಮದ್ವೆ ನಂತರ ಪುರುಷರಿಗೆ ಬೊಜ್ಜಿನ ಸಮಸ್ಯೆ ಹೆಚ್ಚಾಗಲು ಕಾರಣವೇನು ಗೊತ್ತಾ? Post Marriage Weight Gain In Men
Post Marriage Weight Gain In Men: ಮದುವೆಯ ನಂತರ ಪುರುಷರು ಮತ್ತು ಮಹಿಳೆಯರಲ್ಲಿ ಅನೇಕ…