More

    ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಒತ್ತಾಯಿಸಿ ಪ್ರತಿಭಟನೆ

    ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಬುಧವಾರ ಶಾಂತವೇರಿ ಗೋಪಾಲ ಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪದಾಧಿಕಾರಿಗಳು ಬಾಲರಾಜ ಅರಸ್ ರಸ್ತೆಯ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪರಿಶ್ರಮದಿಂದ ವಿಮಾನ ನಿಲ್ದಾಣ ಅಭಿವೃದ್ಧಿಯಾಗಿದೆ. ಈ ವಿಮಾನ ನಿಲ್ದಾಣಕ್ಕೆ ಜಿಲ್ಲೆಯವರೇ ಆದ ಮೇರು ಸಾಹಿತಿ ಕುವೆಂಪು ಅವರ ಹೆಸರು ಸೂಕ್ತವಾಗಿದೆ. ಆದರೆ ವಿಮಾನ ನಿಲ್ದಾಣ ಉದ್ಘಾಟನೆಗೊಂಡು ಏಳೆಂಟು ತಿಂಗಳು ಕಳೆದಿದೆ. ವಿವಿಧ ನಗರಗಳಿಗೆ ವಿಮಾನಗಳ ಹಾರಾಟವೂ ಶುರುವಾಗಿದೆ. ಆದರೂ ನಿಲ್ದಾಣಕ್ಕೆ ಕುವೆಂಪು ಹೆಸರು ಅಧಿಕೃತವಾಗಿ ಘೋಷಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ತಕ್ಷಣ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ನಾಮಕರಣಗೊಳಿಸಿ ಆದೇಶ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಸ್ಥಳೀಯ ಅಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಎಸ್.ವಿ.ರಾಜಮ್ಮ, ಡಾ. ಶೇಖರ್ ಗೌಳೇರ್, ಮಂಜುನಾಥ್ ಪಟೇಲ್, ಮಂಜುನಾಥ್, ಎಲ್.ಆದಿಶೇಷ, ಶಿವಣ್ಣ, ಡಾ. ನೇತ್ರಾವತಿ, ಜಿ.ವಿ.ಮಂಜುಳಾ, ಸುವರ್ಣಾ ನಾಗರಾಜ್, ರೇಷ್ಮಾ, ಟಿ.ಬಿ.ಸೋಮಶೇಖರಯ್ಯ, ಗೋಪಾಲಕೃಷ್ಣ, ಶಂಕ್ರನಾಯ್ಕ್, ಗೋವಿಂದಸ್ವಾಮಿ, ಪ್ರದೀಪ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts