

ಕುಂದಾಪುರ: ಕುಂದಾಪುರದಿಂದ ತಲ್ಲೂರು ಮಾವಿನಕಟ್ಟೆ ಮಾರ್ಗವಾಗಿ ಗುಲ್ವಾಡಿಗೆ ಅಲ್ಲಿಂದ ಸೌಕೂರು, ಕಂಡ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಹೆಂಚು ಕಾರ್ಮಿಕರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಗುಲ್ವಾಡಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಪಿಡಿಒ ಮೂಲಕ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಖಾಸಗಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸದೆ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಅನಾರೋಗ್ಯ ಪೀಡಿತರಿಗೆ ತೊಂದರೆಯಾಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವುದರಿಂದ ಮಹಿಳೆಯರಿಗೆ ಶಕ್ತಿ ಯೋಜನೆ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರಯೋಜನ ದೊರೆಯುವಂತೆ ಮಾಡಬೇಕೆಂದು ಒತ್ತಾಯಿಸಿದರು.
ಹೆಂಚು ಕಾರ್ಮಿಕರ ಮುಖಂಡರಾದ ಜಿ.ಡಿ.ಪಂಜು, ನಾಗರಾಜ್, ಚಂದ್ರ, ಭಾಸ್ಕರ, ಎಚ್.ನರಸಿಂಹ, ಕೃಷಿ ಕೂಲಿಕಾರರ ಮುಖಂಡರಾದ ನಾಗರತ್ನಾ, ಶೋಭಾ, ಜೆಎಂಎಸ್‌ನ ಶೀಲಾವತಿ, ಕಟ್ಟಡ ಕಾರ್ಮಿಕರ ಮುಖಂಡರಾದ ಚಂದ್ರಶೇಖರ್ ವಿ., ರೆಹವಾನ್, ಅಣ್ಣಪ್ಪ, ರಾಜೀವ ಪಡುಕೋಣೆ ಮೊದಲಾದವರು ಉಪಸ್ಥಿತರಿದ್ದರು.