More

    ಮೂಲಸೌಕರ್ಯ ನೀಡಲು ಆಗ್ರಹಿಸಿ ಪ್ರತಿಭಟನೆ

    ಸಕಲೇಶಪುರ: ತಾಲೂಕಿನ ಹೆಬ್ಬಸಾಲೆ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗುಡಿಸಲುಗಳಿಗೆ ವಿದ್ಯುತ್, ನೀರು, ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಆದಿದ್ರಾವಿಡ ತುಳು ಸಮಾಜದ ಜನರು ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.


    ಎರಡು ವರ್ಷಗಳ ಹಿಂದೆ ತಾಲೂಕಿನ ವಿವಿಧ ಕಾಫಿ ತೋಟಗಳಲ್ಲಿ ಕೆಲಸ ಮಾಡಿಕೊಂಡು ವಯಸ್ಸಾದ ನಂತರ ತೋಟದಿಂದ ಹೊರಬಿದ್ದ 20 ಕುಟುಂಬಗಳು ಗ್ರಾಮದ ಗೋಮಾಳದಲ್ಲಿ ಗುಡಿಸಲು ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದ್ದು, ಮೂಲ ಸೌಕರ್ಯಕ್ಕಾಗಿ ಅಂದಿನಿಂದ ಒತ್ತಾಯಿಸುತ್ತಿದ್ದರೂ ರಾಜಕೀಯ ಒತ್ತಡದಿಂದ ಅಧಿಕಾರಿಗಳು ಯಾವುದೇ ಸೌಕರ್ಯ ನೀಡುತ್ತಿಲ್ಲ ಎಂದು ಆರೋಪಿಸಿದರು.


    ಹೆಬ್ಬಸಾಲೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಉಪವಿಭಾಗಾಧಿಕಾರಿ ಡಾ.ಶ್ರುತಿ ಹಾಗೂ ತಹಸೀಲ್ದಾರ್ ಮೇಘನಾ, ಗೋಮಾಳ ಜಾಗಕ್ಕೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ. ಅಲ್ಲದೆ ಗುಡಿಸಲು ನಿರ್ಮಿಸಿರುವ ಜಾಗ ರೈಲ್ವೆ ಬಫರ್ ಜೋನ್‌ಗೆ ಒಳಪಡುವ ಸಾಧ್ಯತೆ ಇರುವುದರಿಂದ ಸೋಮವಾರದೊಳಗಾಗಿ ಸರ್ವೇ ಕಾರ್ಯ ನಡೆಸಲಿದ್ದೇವೆ. ಇನ್ನೂ 15 ದಿನಗಳಲ್ಲಿ ಕುಡಿಯುವ ನೀರು ಸೌಲಭ್ಯ ಕಲ್ಪಿಸಲಾಗುವುದು ಎಂದು ಇಬ್ಬರು ಅಧಿಕಾರಿಗಳು ಭರವಸೆ ನೀಡಿದರೂ ಪ್ರತಿಭಟನಾಕಾರರು ಧರಣಿ ಮುಂದುವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts