ರೈತರ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

22 Manvi
Published on

ಶಿಗ್ಗಾಂವಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಮತ್ತು ತಾಲೂಕಿನ ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಮತ್ತು ಸರ್ಕಾರ ಸ್ಪಂದಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಕಾರ್ಯಕರ್ತರು ತಾಲೂಕಿನ ದುಂಡಸಿ ಗ್ರಾಮದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ತಾಲೂಕಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು. 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ವಿತರಿಸಬೇಕು. ಕಬ್ಬನ್ನು ಬೆಳೆ ವಿಮೆ ಮತ್ತು ಬೆಳೆ ಹಾನಿ ವ್ಯಾಪ್ತಿಗೆ ಒಳಪಡಿಸಬೇಕು. ತಾಲೂಕಿನ ಕೋಣನಕೇರಿಯಲ್ಲಿರುವ ವಿ.ಐ.ಎನ್‌ಪಿ. ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುವ ಮನ್ನ ರೈತರನ್ನು ಮತ್ತು ರೈತರ ಸಂಘದ ಸಭೆ ಕರೆದು ಎಫ್‌ಆರ್‌ಪಿ ನಿಗದಿ ಪಡಿಸಬೇಕು. ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು ರೈತರ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿನ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಭತ್ತ (ನೀರಾವರಿ) ಮತ್ತು ಗೋವಿನ ಜೋಳ (ನೀರಾವರಿ) ಬೆಳೆಗಳನ್ನು ಮುಂಗಾರು ಹಂಗಾಮಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೆಳೆ ವಿಮೆ ಕಟ್ಟಲು ಅವಕಾಶ ಕಲ್ಪಿಸುವುದು ಮತ್ತು ರೈತರಿಗೆ ನೀರಾವರಿ ಸ್ಪಿಂಕ್ಲರ್ ಪೈಪ್ ಮತ್ತು ಜೆಟ್‌ಗಳನ್ನು ಏಳು ವರ್ಷಗಳ ಬದಲಾಗಿ ಪ್ರತಿ ಮೂರು ವರ್ಷಕ್ಕೊಮ್ಮೆ ವಿತರಣೆ ಮಾಡಬೇಕೆಂದು ಒತ್ತಾಯಿಸಿದರು.

ರೈತ ಸಂಘದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವ್ಯಾಪ್ತಿಗೆ ಬರುವ ರೈತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ ಸರ್ಕಾರದ ಮೂಲಕ ಇತ್ಯರ್ಥವಾಗುವಂತ ಸಮಸ್ಯೆಗಳನ್ನು ಸರ್ಕಾರಕ್ಕೆ ರವಾನಿಸುವುದಾಗಿ ತಿಳಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮುತ್ತಣ್ಣ ಗುಡಗೇರಿ, ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಈಶ್ವರಗೌಡ ಪಾಟೀಲ, ಮಾಲತೇಶ ಹೊಸೂರ, ಲಿಂಗಯ್ಯ ಪೂಜಾರ, ನಾಗಪ್ಪ ಕೊಟ್ಟಣದ, ಲಕ್ಷ್ಮಣ ಹಂಚಿನಮನಿ, ಆನಂದ ಕೆಳಗಿನಮನಿ, ಅಶೋಕ ಮಡ್ಲಿ, ದಯಾನಂದ ಮೆಣಸಿನಕಾಯಿ, ವೀರಪ್ಪ ಸುಣಗಾರ, ಶಬ್ಬೀರಖಾನ್ ದೊಡ್ಮನಿ, ಮಾಲತೇಶ ಬರಕೇರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net