ಸುಳ್ಳು ಕೇಸ್‌ಗಳನ್ನು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

dss protest

ಶಿವಮೊಗ್ಗ: ಹೊಳೆಹೊನ್ನೂರು ಹೋಬಳಿ ಡಿ.ಬಿ.ಹಳ್ಳಿ ಹಾಗೂ ಅರದೊಟ್ಲು ಗ್ರಾಮದ ದಲಿತರಿಗೆ ಚಂದನಕೆರೆಯಲ್ಲಿ ಎರಡು ಎಕರೆ ಹಕ್ಕುಪತ್ರ ನೀಡಲಾಗಿತ್ತು. ಭೂಹಕ್ಕು ನೀಡುವಂತೆ ಪ್ರತಿಭಟನೆ ನಡೆಸಿದ ರೈತರನ್ನು ಜಿಲ್ಲಾಡಳಿತದ ಮೂಲಕ ಬಂಧಿಸಲಾಗಿದೆ ಎಂದು ಆರೋಪಿಸಿ ಡಿಎಸ್‌ಎಸ್ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಎಂಪಿಎಂ ಆಕ್ರಮಿಸಿಕೊಂಡಿರುವ ದಲಿತರ ಭೂಮಿಯನ್ನು ಜಂಟಿ ಸರ್ವೇ ಮಾಡಿ ಹದ್ದುಬಸ್ತು ಮಾಡಿಸಿಕೊಡುವಂತೆ ಒತ್ತಾಯಿಸಿ 82 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ದಲಿತರನ್ನು ಬಂಧಿಸಲಾಗಿದೆ. ಚಂದನಕೆರೆಯ 21 ಹಾಗೂ ಕಲ್ಲಿಹಾಳ್ ಗ್ರಾಮದ 21 ಜನರು ತಲಾ ಎರಡು ಎಕರೆಯಂತೆ ಬಗರ್‌ಹುಕುಂ ಸಾಗುವಳಿ ಮಾಡುತ್ತ ಭೂ ಮಂಜೂರಾತಿಗಾಗಿ ನಮೂನೆ 53 ಮತ್ತು 50ರಲ್ಲಿ ಅರ್ಜಿ ಸಲ್ಲಿಸಿದ್ದು, ಮಂಜೂರಾತಿ ಹಂತದಲ್ಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ತಮ್ಮ ಭೂಮಿ ತಮಗೆ ಕೊಡಿ. ಹದ್ದುಬಸ್ತು ಮಾಡಿ ತಮಗೇ ಭೂಮಿ ನೀಡುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದವರನ್ನು ಮಾವಿನಕಟ್ಟೆ ವಲಯ ಅರಣ್ಯ ಕಚೇರಿಗೆ ಕರೆದೊಯ್ಯಲಾಗಿದೆ. ಇದಕ್ಕೆ ಪೊಲೀಸರನ್ನು ಬಳಸಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರತಿಭಟನಾ ಸ್ಥಳಕ್ಕೆ ಬಂದಾಗ ಜಂಟಿ ಸರ್ವೇ ನಡೆಸಿ ಭೂಮಿ ಹದ್ದುಬಸ್ತು ಮಾಡಿಸಿ ದಲಿತರಿಗೆ ಭೂಮಿ ಬಿಡಿಸಿಕೊಡಬೇಕೆಂದು ಮನವಿ ಸಲ್ಲಿಸಿದ್ದರೂ ಎಂಪಿಎಂ ಕಾವಲುಗಾರ, ಸಿಬ್ಬಂದಿ ದೌರ್ಜನ್ಯ ಎಸಗಿದ್ದಾರೆ. ಬಂಧಿತ ಧರಣಿ ನಿರತರನ್ನು ಬಿಡುಗಡೆ ಮಾಡಬೇಕು. ಎಂಪಿಎಂ ಅವ್ಯವಹಾರ ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಡಿಎಸ್‌ಎಸ್ ಹೋರಾಟಗಾರರ ಮೇಲೆ ದಾಖಲಿಸಿರುವ ಸುಳ್ಳು ಕೇಸ್‌ಗಳನ್ನು ಜಿಲ್ಲಾಡಳಿತ ಕೈಬಿಡಬೇಕು ಎಂದು ಆಗ್ರಹಿಸಿದರು.
ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್.ಹಾಲೇಶಪ್ಪ, ಪ್ರಮುಖರಾದ ಶಿವಕುಮಾರ್ ಆಸ್ತಿ, ಶೇಷಪ್ಪ ಹುಣಸೋಡು, ಪರಮೇಶ್ ಸೂಗೂರು, ರಂಗಸ್ವಾಮಿ ಇತರರಿದ್ದರು.

Share This Article

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

30 ದಿನಗಳಲ್ಲೇ ಸ್ಲಿಮ್ ಆ್ಯಂಡ್​ ಫಿಟ್​ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…