ಸಮರ್ಪಕ ನೀರು ಸರಬರಾಜಿಗೆ ಆಗ್ರಹಿಸಿ ಪ್ರತಿಭಟನೆ; ಪಿಡಿಒ ಮೇಲೆ ಹಲ್ಲೆ

Protest
Published on

ಬೀದರ್​: ರಾಜ್ಯದಲ್ಲಿ ಮುಂಗಾರು ಪ್ರವೇಶ ವಿಳಂಬವಾಗಿದ್ದು, ಜನರ ಗೋಳು ಹೇಳಿ ತೀರದಾಗಿದೆ. ಒಂದೆಡೆ ರೈತರು ಬಿತ್ತನೆ ಮಾಡದೆ ಮಳೆರಾಯನನ್ನೇ ನೆಚ್ಚಿಕೊಂಡು ಕುಳಿತುಕೊಂಡಿದ್ದರೆ. ಕೆಲವೆಡೆ ಜನರು ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜನರ ಕಷ್ಟ ಹೇಳಿ ತೀರದಾಗಿದೆ.

ಇನ್ನು ಪ್ರಕರಣ ಒಂದರಲ್ಲಿ ಕುಡಿಯುವ ನೀರಿನ ವಿಚಾರವಾಗಿ ಮಹಿಳೆಯರು ಪಿಡಿಒ ಮೇಲೆ ಹಲ್ಲೆ ನಡೆಸಿರುವ ಬೀದರ್​ ಜಿಲ್ಲೆ ಔರಾದ್​ ತಾಲ್ಲೂಕಿನ ಜಂಬಗಿ ಗ್ರಾಮದ ಘಾಮಾ ತಾಂಡಾದಲ್ಲಿ ನಡೆದಿದೆ.

ತೆಲಂಗಾಣ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಜಂಬಗಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಡಿಒ ಶ್ವೇತಾ ಹಾಗು ಅಧಿಕಾರಿಗಳಿಗೆ ಸಮರ್ಪಕವಾಗಿ ನೀರು ಯಾಕೆ ಪೂರೈಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

Assault

ಕಳೆದ ಆರು ತಿಂಗಳಿನಿಂದ ತಾಂಡಾಕ್ಕೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ದೂರು ಸಲ್ಲಿಸಿದ್ದ್ರರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರು ಹಾಗೂ ಪಿಡಿಒ ಶ್ವೇತಾ ನಡುವೆ ಮಾತಿಗೆ ಮಾತು ಬೆಳೆದಿದ್ದು, ಮಹಿಳೆಯರು ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಿಡಿಒ ಶ್ವೇತಾ ಘಾಮಾ ತಾಂಡಾಕ್ಕೆ ಬಾವಿಯಿಂದ ಪೈಪ್​ಲೈನ್​ ಮಾಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದೇವೆ. ಆದರೆ, ಅಲ್ಲಿನ ನಿವಾಸಿಗಳು ಪದೇ ಪದೇ ಪೈಪ್​ಅನ್ನು ಹೊಡೆದು ಹಾಕುತ್ತಿದ್ದಾರೆ. ಈ ವಿಚಾರವಾಗಿ ಶನಿವಾರ ಪ್ರತಿಭಟನೆ ನಡೆಸಿದ್ದು, ನನ್ನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ಧೇನೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net