More

    8ಕ್ಕೆ ಬೆಳಗಾವಿ ಸುವರ್ಣಸೌಧ ಆವರಣದಲ್ಲಿ ಪ್ರತಿಭಟನೆ

    ಜಮಖಂಡಿ: ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ತರುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಡಿ.8 ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿ ಸುವರ್ಣಸೌಧ ಆವರಣದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘ ಹಾಗೂ ಎಲ್ಲ ಮಾದಿಗ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ಅಧ್ಯಕ್ಷ ಶಂಕರ ಪೂಜೇರಿ ತಿಳಿಸಿದರು.

    ನಗರದ ಕಾನಿಪ ಸಂಘದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾದಿಗರ ಬೇಡಿಕೆಗಳ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

    ಮಾದಿಗರ ಮೇಲೆ ಕೊಲೆ, ದೌರ್ಜನ್ಯ, ಅತ್ಯಾಚಾರ, ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಂತರಾಜ ವರದಿ ಜಾರಿಗೊಳಿಸಬೇಕು. ಆದಿಜಾಂಬವ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು. ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ತರಬೇಕೆಂದು ಆಗ್ರಹಿಸಿದರು.

    ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಜಿ. ಪರಮೇಶ್ವರ ಅವರು ಹೇಳಿದಂತೆ ನಡೆದುಕೊಳ್ಳಬೇಕು, ಮಾತಿಗೆ ತಪ್ಪದೆ ನಮಗೆ ನ್ಯಾಯ ನೀಡಬೇಕೆಂದು ಒತ್ತಾಯಿಸಿದರು.

    ಸುವರ್ಣಸೌಧದ ಆವರಣದಲ್ಲಿ ನಡೆಯುವ ಮಾದಿಗರ ಹೋರಾಟದಲ್ಲಿ ರಾಜ್ಯಾದ್ಯಂತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಈ ಪ್ರತಿಭಟನೆಯಲ್ಲಿ ಸಮಾಜದ ಅಂದಾಜು 25 ರಿಂದ 30 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದರು.

    ರಾಜ್ಯ ಉಪಾಧ್ಯಕ್ಷ ರಾಮಣ್ಣ ಮೇತ್ರಿ, ಬೆಳಗಾವಿ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಹಲಸಂಗಿ, ಜಿಲ್ಲಾ ಉಪಾಧ್ಯಕ್ಷ ಪರಶುರಾಮ ಮಾಂಗ, ಕುಮಾರ ಹೊಸಮನಿ, ರತನ ಹಿರಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts