ರಾಯಿ ಗ್ರಾಪಂ ಕಚೇರಿ ಮುಂದೆ ಧರಣಿ

New Project (39)
Published on

ಬಂಟ್ವಾಳ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬಿಜೆಪಿ ಬಂಟ್ವಾಳ ಮಂಡಲ ಆಶ್ರಯದಲ್ಲಿ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ರಾಯಿ ಗ್ರಾಪಂ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬುಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ, ರಾಯಿ ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷೆ ಗುಣವತಿ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲ ಮಾಜಿ ಕಾರ್ಯದರ್ಶಿ ರಮಾನಾಥ ರಾಯಿ ಹಾಗೂ ಧರ್ಮೋತ್ತಾನ ಪ್ರತಿಷ್ಠಾನ ವೇದಿಕೆ ರಾಯಿ, ಅರಳ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ದ.ಕ. ಬಿಜೆಪಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಸಹಸಂಚಾಲಕ ಹರೀಶ್ ರಾಯಿ, ಬಂಟ್ವಾಳ ಬಿಜೆಪಿ ಮಂಡಲ ಪ್ರಕೋಷ್ಠಗಳ ಸಂಚಾಲಕರಾದ ಚಂದ್ರಶೇಖರ ಗೌಡ ಕಾರಂಬಡೆ, ಸಂತೋಷ್ ಅಂಚನ್, ಆನಂದ ಬುರಾಲ್, ಜಯಂತ್ ಸಫಲ್ಯ, ಬಿಜೆಪಿ ಬಂಟ್ವಾಳ ಕಾರ್ಯಕಾರಿಣಿ ಸದಸ್ಯ ರವೀಂದ್ರ ಪೂಜಾರಿ ಬದನಡಿ ಭಾಗವಹಿಸಿದ್ದರು. ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net