ನಗರದಲ್ಲಿ ತ್ರಿವಳಿ ಪ್ರತಿಭಟನೆ

ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ನಗರದಲ್ಲಿ ಮೂರು ಪ್ರತ್ಯೇಕ ಪ್ರತಿಭಟನೆಗಳು ನಡೆದವು.
ಸೇವಾಭದ್ರತೆಗೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿ ಧರಣಿ ಆರಂಭಿಸಿದರು.
ರಾಜ್ಯದ 411 ಸರ್ಕಾರಿ ಪದವಿ ಕಾಲೇಜಿನಲ್ಲಿ 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಮಗೆ ಯಾವುದೇ ಸೇವಾ ಭದ್ರತೆ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಇನ್ನು ಈ ಬಗ್ಗೆ ಹಲವು ಬಾರಿ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಗೂಲಿ ನೌಕರರ ಪ್ರತಿಭಟನೆ: ರಾಜ್ಯದ ವಿವಿಧ ಇಲಾಖೆ, ನಿಗಮ, ಸ್ಥಳೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು, ಹೊರಗುತ್ತಿಗೆ ಮತ್ತು ಒಳಗುತ್ತಿಗೆ ನೌಕರರು ಮತ್ತು ದಿನಗೂಲಿಯಿಂದ ಕಾಯಂಗೊಂಡ ನೌಕರರು ಡಿಸಿ ಕಚೇರಿ ಬಳಿ ಒಂದು ದಿನದ ಧರಣಿ ನಡೆಸಿದರು.
ನೂರಡಿ ರಸ್ತೆ ಅಭಿವೃದ್ಧಿಗೆ ಒತ್ತಾಯ: ನಗರದ ನೂರಡಿ ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.