More

    ಮಾರುಕಟ್ಟೆಗೆ ಮೂಲೌಲಭ್ಯ ಕಲ್ಪಿಸಲು ಆಗ್ರಹ: ರೇಷ್ಮೆ ಬೆಳೆಗಾರರ ಒಕ್ಕೂಟದಿಂದ ಪ್ರತಿಭಟನೆ

    ಮಳವಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೇಷ್ಮೆ ಬೆಳೆಗಾರರ ಒಕ್ಕೂಟದ ಸದಸ್ಯರು ಪಟ್ಟಣದಲ್ಲಿ ಮಾರುಕಟ್ಟೆ ಎದುರು ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
    ಬೆಳೆಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಮಾತನಾಡಿ, ರಾಜ್ಯದಲ್ಲೇ ಮಂಡ್ಯ ಜಿಲ್ಲೆ ರೇಷ್ಮೆ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದ್ದು, ರೇಷ್ಮೆ ವಹಿವಾಟಿನಲ್ಲಿ ಸರ್ಕಾರಕ್ಕೆ 300 ಕೋಟಿ ರೂ. ವಾರ್ಷಿಕ ತೆರಿಗೆ ಮೂಲಕ ಆದಾಯ ತಂದುಕೊಡುತ್ತಿದೆ. ಆದರೆ ಪಟ್ಟಣದ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಶೌಚಗೃಹ ಸೇರಿದಂತೆ ಮೂಲಸೌಲಭ್ಯಗಳಿಲ್ಲ. 12 ಸಿಬ್ಬಂದಿ ಇರಬೇಕಿದ್ದ ಮಾರುಕಟ್ಟೆಯಲ್ಲಿ ಕೇವಲ ಇಬ್ಬರು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಬೆಳೆಗಾರರಿಗೆ ಬಿಡ್ಡಿಂಗ್ ಪ್ರಕ್ರಿಯೆಗಳಲ್ಲಿ ನ್ಯಾಯಯುತ ಬೆಲೆ ಸಿಗದೆ ಅನ್ಯಾಯವಾಗುತ್ತಿದೆ. ಕೂಡಲೇ ಮಾರುಕಟ್ಟೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಭುಲಿಂಗು, ಪ್ರಕಾಶ್, ಬಸವರಾಜು, ರಾಮಲಿಂಗಯ್ಯ, ಶಂಕರೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts