More

    ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

    ಶಿವಮೊಗ್ಗ: ರೈಲ್ವೆ ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ರಾಯಣ್ಣ ಅಭಿಮಾನಿಗಳು, ರೈತ, ದಲಿತ, ಕನ್ನಡಪರ ಸಂಘಟನೆಗಳು, ಕುರುಬ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಖಾಸಗಿ ಬಸ್ ನಿಲ್ದಾಣದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ಮಹಾನಗರ ಪಾಲಿಕೆ ಅಧಿಕಾರಿಗಳು ಕೆಲ ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕತ್ತಿ, ಗುರಾಣಿ ಪ್ರತಿಕೃತಿ ಇಟ್ಟಿದ್ದು, ಅದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲ. ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ ಪ್ರಾಣವನ್ನೇ ಅರ್ಪಿಸಿದ ಮಹಾನ್ ವೀರ ಸೇನಾನಿ. ಆದ್ದರಿಂದ ಕತ್ತಿ, ಗುರಾಣಿ ತೆರವುಗೊಳಿಸಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
    ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಮುಖಂಡರಾದ ಗಣೇಶ್ ಬಿಳಗಿ, ವಸಂತಕುಮಾರ್, ಸುಬ್ಬೇಗೌಡ, ಶಾಂತಾ ಸುರೇಂದ್ರ, ಲಿಂಗರಾಜ್, ಲೊಕೇಶ್, ನಾಗರಾಜ್, ಅಕ್ಬರ್ ಪಾಷಾ, ನವುಲೆ ಮಂಜು, ನಿರಂಜನ್, ಮಧುಸೂದನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts