ಮಂಗಳೂರು: ಲೈಟ್ ಫಿಶಿಂಗ್ ಮತ್ತು ಬುಲ್ಟ್ರಾಲ್ ಮೀನುಗಾರಿಕೆ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಮತ್ತು ಬೇಡಿಕೆ ಈಡೇರುವವರೆಗೆ ಬಂದರು ದಕ್ಕೆಯಲ್ಲಿರುವ ಮೀನುಗಾರಿಕಾ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಜ.31ರಿಂದ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಧರಣಿ ನಡೆಸಲು ಸಾಂಪ್ರದಾಯಿಕ ಮೀನುಗಾರರು ನಿರ್ಧರಿಸಿದ್ದಾರೆ.
ದಕ್ಕೆಯಲ್ಲಿ ಬುಧವಾರ ಮಂಗಳೂರು ಟ್ರಾಲ್ಬೋಟ್ ಮೀನುಗಾರರ ಸಂಘ ವಿಶೇಷ ಮಹಾಸಭೆಯಲ್ಲಿ ಮೀನುಗಾರರು ಈ ನಿರ್ಧಾರ ಕೈಗೊಂಡಿದ್ದಾರೆ. ಸಂಘ ಅಧ್ಯಕ್ಷ ನಿತಿನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬ್ಬಾಸ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಉಳ್ಳಾಲ್, ಕೋಶಾಧಿಕಾರಿ ಇಬ್ರಾಹೀಂ ಬೆಂಗರೆ, ಜತೆ ಕಾರ್ಯದರ್ಶಿ ಸಂದೀಪ್ ಉಪಸ್ಥಿತರಿದ್ದರು.
ಡಿಸಿ ಸೂಚನೆ: ಬಂದರು ದಕ್ಕೆಯಲ್ಲಾಗುವ ಬೆಳವಣಿಗೆಯ ಮಾಹಿತಿ ಪಡೆದುಕೊಂಡಿರುವ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ನಿಯಮ ಉಲ್ಲಂಘಿಸಿ ಲೈಟ್ಫಿಶಿಂಗ್ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಕರಾವಳಿ ತಟ ರಕ್ಷಣಾ ಪಡೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.