More

    ಸಾಮೂಹಿಕ ಇಷ್ಟಲಿಂಗ ಪೂಜೆ ಮೂಲಕ ಪ್ರತಿಭಟನೆ

    ಶಿವಮೊಗ್ಗ: ಲೋಕಸಭೆ ಚುನಾವಣೆಗೂ ಮುನ್ನವೇ ಪಂಚಮಸಾಲಿ, ಗೌಡ, ಮಲೆಗೌಡ, ದೀಕ್ಷೆ ಲಿಂಗಾಯತರಿಗೆ 2ಎ ಹಾಗೂ ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ಮೀಸಲಾತಿ ಘೋಷಣೆ ಮಾಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಫೆ.14ರಂದು ಹೆದ್ದಾರಿ ತಡೆ ಹಾಗೂ ಜಿಲ್ಲಾಮಟ್ಟದ ಇಷ್ಟಲಿಂಗ ಪೂಜೆ ಮಾಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

    ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು ಇದೀಗ ಆರನೇ ಹಂತದ ಚಳವಳಿ ಅಂಗವಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚಾರ ಮಾಡಿ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಪಂಚಮಸಾಲಿ ಸಮಾಜದ ನಿರಂತರ ಹೋರಾಟದ ಲವಾಗಿ ಬಸವರಾಜ ಬೊಮ್ಮಾಯಿ ಸರ್ಕಾರ 2ಡಿ ಮೀಸಲಾತಿ ಘೋಷಿಸಿತ್ತು. ನಾವು ಆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದೆವು. ಆದರೆ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಬಂದಿದ್ದರಿಂದ ಮೀಸಲಾತಿ ಜಾರಿ ಆಗಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿ ಅಧಿವೇಶನದಲ್ಲೇ ಈ ಬಗ್ಗೆ ಮನವಿ ಮಾಡಿದ್ದೇವೆ. ಕಾನೂನು ತಜ್ಞರ ಸಭೆ ಕರೆಯುವುದಾಗಿ ಸಿಎಂ ತಿಳಿಸಿದ್ದರು. ಈಗ ಎರಡು ತಿಂಗಳಾದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಪಂಚಮಸಾಲಿ, ಗೌಡ, ಮಲೆಗೌಡ, ದೀಕ್ಷೆ ಲಿಂಗಾಯತರಿಗೆ 2ಎ ಮೀಸಲಾತಿ ಅನುಷ್ಠಾನಕ್ಕೆ ಹಾಗೂ ಲಿಂಗಾಯತ ಉಪಸಮಾಜಗಳಿಗೆ ಒಬಿಸಿ ಮೀಸಲಾತಿಗೆ ಕೂಡಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಾರಸು ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿದ್ದು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ನಾವು ಪ್ರತಿಭಟನೆಯನ್ನು ಆರಂಭಿಸಿದ್ದೇವೆ ಎಂದರು.
    ಈಗಾಗಲೇ 9 ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಿದ್ದೇವೆ. ಈಗ ಶಿವಮೊಗ್ಗದಲ್ಲೂ ಈ ಪ್ರತಿಭಟನೆ ನಡೆಯುತ್ತದೆ. ೆ.14ರಂದು ಬೆಳಗ್ಗೆ 10ಕ್ಕೆ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ನಡೆಸಿ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಸಾಮೂಹಿಕವಾಗಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಸಮಾಜದ ಸಾವಿರಾರು ಜನರು ಭಾಗವಹಿಸುವರು ಎಂದರು.
    ಪಂಚಮಸಾಲಿ ಸಮಾಜದ ಪ್ರಮುಖರಾದ ಎಚ್.ವಿ.ಮಹೇಶ್ವರಪ್ಪ, ಬಿ.ಎಸ್.ಶಿವಕುಮಾರ್, ಬಳ್ಳೇಕೆರೆ ಸಂತೋಷ್, ಮಹೇಶ್‌ಮೂರ್ತಿ, ಡಾ. ಲಿಂಗಪ್ಪ ಚಳಗೇರಿ, ವಿಜಯ್‌ಕುಮಾರ್, ರುದ್ರೇಗೌಡ ಪಾಟೀಲ್, ಸತೀಶ್, ಶಿವರಾಜ್, ರಾಜಶೇಖರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts