More

    ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೊಷಿಸಲು ಒತ್ತಾಯಿಸಿ ಪ್ರತಿಭಟನೆ

    ಹಾವೇರಿ: ಜಿಲ್ಲೆಯಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯಲಾಗುತ್ತಿದ್ದು, ಈ ಬಾರಿ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೊಷಿಸಿ, ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ರೈತ ಸೇನಾ ಕರ್ನಾಟಕ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸೇನಾ ಕರ್ನಾಟಕದ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ ಎಂ. ಪಾಟೀಲ ಮಾತನಾಡಿ, ಈಗಾಗಲೇ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಐದಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಸರ್ಕಾರ ಬೆಂಬಲ ಬೆಲೆ ಘೊಷಿಸಲಿದೆ ಎಂದುಕೊಂಡು ಅನೇಕ ರೈತರು ಮೆಕ್ಕೆಜೋಳವನ್ನು ಸಂಗ್ರಹಿಸಿಟ್ಟಿದ್ದರು. ಇನ್ನೂ ಹೆಚ್ಚು ದಿನ ಹಾಗೇ ಬಿಟ್ಟರೆ ಸಾಲಗಾರರ ಕಾಟ ಹೆಚ್ಚಾಗುತ್ತದೆ ಎಂದು ರೈತರು ಸಿಕ್ಕ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಬೆಳೆ ಬೆಳೆಯಲು ಮಾಡಿದ ಖರ್ಚು ರೈತರಿಗೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದೆ. ರೈತರ ಸಮಸ್ಯೆ ಪರಿಹಾರಕ್ಕೆ ಒಬ್ಬರ ಮೇಲೊಬ್ಬರತ್ತ ಬೆರಳು ತೋರದೇ ಕೂಡಲೆ ಜಿಲ್ಲೆಯ ಸಚಿವರು, ಶಾಸಕರು, ಸಂಸದರು ಸರ್ಕಾರಗಳ ಮೇಲೆ ಒತ್ತಡ ತಂದು ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

    ರೈತ ಮುಖಂಡರಾದ ಶಿವಾನಂದ ಹೊಸಮನಿ, ಮಲ್ಲಣ್ಣ ಆಲೇಕರ, ಫಕೀರಪ್ಪ ವಾಲ್ಮೀಕಿ, ಬಸವರಾಜ ದೊಡ್ಡಗೌಡ್ರ, ಶಂಕರಗೌಡ ಸಣ್ಣಗೌಡ್ರ, ಕೋಟೆಪ್ಪ ಸಂಜೀವಣ್ಣನವರ, ಮಹ್ಮದ ಮುಲ್ಲಾ, ಆರ್.ಡಿ. ಗಿರೀಶ, ಈರನಗೌಡ ಪಾಟೀಲ, ಸೋಮಶೇಖರ ಅಣ್ಣಿಗೇರಿ, ಎಸ್.ಎಸ್. ಹುರಳಿ, ನಾಗನಗೌಡ ಮರಿಗೌಡ್ರ ಇತರರು ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts