More

    ಮುಸ್ಲಿಮರಿಗೆ 2ಬಿ ಮೀಸಲಾತಿ ಶೇ.8ಕ್ಕೆ ಹೆಚ್ಚಿಸಲು ಆಗ್ರಹಿಸಿ ಧರಣಿ

    ಬೆಂಗಳೂರು: ರಾಜ್ಯ ಸರ್ಕಾರ ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕು ಮತ್ತು ಮುಸ್ಲಿಮರ ಮೀಸಲಾತಿ 2ಬಿ ಪ್ರಮಾಣವನ್ನು ಶೇ. 8ಕ್ಕೆ ಏರಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದೆ.

    ಎಸ್‌ಡಿಪಿಐಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ಅಹಿಂದ ವರ್ಗಗಳಿಗೆ ಹೇಳಿತ್ತು ನಾವು ಅಧಿಕಾರಕ್ಕೆ ಬಂದರೆ ಕಾಂತರಾಜ್ ವರದಿಯನ್ನು ಜಾರಿಗೊಳಿಸುತ್ತೇವೆ ಎಂದಿತ್ತು, ಅದೇ ರೀತಿ ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುತ್ತೇವೆ ಎಂದು ಈ ಮಾತನ್ನು ಕಾಂಗ್ರೆಸ್ ಸರ್ಕಾರ ನೀಡದೆ ವಂಚಿಸುತ್ತಿದೆ ಎಂದು ಟೀಕಿಸಿದರು.

    ಸಾಮಾಜಿಕ ನ್ಯಾಯ ಮತ್ತು ಎಲ್ಲಾ ಜನ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಕಾಂತರಾಜ್ ಆಯೋಗ ವರದಿ ಜಾರಿಗೆ ಬರಬೇಕು, ಇದನ್ನು ಸ್ವೀಕರಿಸಿ ಬಹಿರಂಗಗೊಳಿಸದಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಡ ಹೇರುತ್ತಿರುವುದು ಯಾರು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ಪ್ರಶ್ನೆ ಮಾಡಿದರು.

    ಧರಣಿಯಲ್ಲಿ ಮುಸ್ಲಿಂ ಸಮುದಾಯದ ಚಿಂತಕರು, ಸಾಮಾಜಿಕ ಹೋರಾಟಗಾರರು, ವಿವಿಧ ಜಾತಿ, ಸಂಘಟನೆಗಳ ನಾಯಕರು, ರಾಜಕೀಯ ಮುಖಂಡರು, ಮಹಿಳಾ ಮುಖಂಡರು, ಧಾರ್ಮಿಕ ಮುಖಂಡರು ಪಾಲ್ಗೊಂಡು ಬೆಂಬಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts