More

    ಶ್ರೀಲಂಕಾ ಬಿಕ್ಕಟ್ಟು: ಪ್ರತಿಭಟನಾಕಾರರಿಂದ ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ, ಭೀತಿಯಿಂದ ನಿವಾಸ ತೊರೆದ ರಾಜಪಕ್ಸ!

    ಕೊಲಂಬೋ: ಆರ್ಥಿಕ ಸ್ಥಿತಿಯಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಪ್ರತಿಭಟನಾಕಾರರ ಆಕ್ರೋಶದ ಕಟ್ಟೆ ಒಡೆದಿದ್ದು, ರಾಷ್ಟ್ರಪತಿ ನಿವಾಸಕ್ಕೆ ನುಗ್ಗಿ ಹೋರಾಟವನ್ನು ಮುಂದುವರಿಸಿದ್ದಾರೆ.ಶನಿವಾರ ಬೆಳಗ್ಗೆಯಿಂದಲೇ ಸಾವಿರಾರು ಮಂದಿ ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರಯತ್ನಿಸಲು ವಿಫಲರಾದ ಪೊಲೀಸರಿಂದ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ.

    ಕಳೆದ ಜನವರಿಯಿಂದಲೂ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಅನುಭವಿಸುತ್ತಿರುವ ಶ್ರೀಲಂಕಾ ಈವರೆಗೆ ಸುಧಾರಣೆಯ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಅಗತ್ಯ ವಸ್ತುಗಳ ಕೊರತೆಯಿಂದಾಗಿ ಅವುಗಳ ಬೆಲೆ ಗಗನಕ್ಕೇರಿದೆ.ಇವೆಲ್ಲಾ ಸಮಸ್ಯೆಗಳಿಂದ ಕಂಗಾಲಾಗಿರುವ ಜನತೆ ರಾಷ್ಟ್ರಪತಿ ನಿವಾಸಕ್ಕೆ ಸಾಗರೋಪಾದಿಯಲ್ಲಿ ಸುತ್ತುವರಿದು ಮುತ್ತಿಗೆ ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

    ಪ್ರತಿಭಟನಾಕಾರರು ಮುತ್ತಿಗೆ ಹಾಕುತ್ತಿದ್ದಂತೆ ಸೇನೆ ಸಹಾಯದಿಂದ ಅಧ್ಯಕ್ಷ ಗೋತಬಯ ರಾಜಪಕ್ಸ ಸೇನಾ ಪ್ರಧಾನ ಕೇಂದ್ರಕ್ಕೆ ಹೋಗಿದ್ದು, ಅಲ್ಲಿಯೇ ರಕ್ಷಣೆ ಪಡೆಯುತ್ತಿದ್ದಾರೆ. ಈ ನಡುವೆ ಪ್ರಧಾನಿ ರಣಿಲ್​ ವಿಕ್ರಮಸಿಂಘೆ ತುರ್ತು ಸಂಪುಟ ಸಭೆಯನ್ನು ಕರೆದಿದ್ದಾರೆ.ಈ ನಡುವೆ ಕೊಲಂಬೋದ ಹಲವೆಡೆ ಪ್ರತಿಭಟನೆಗಳು ಮುಂದುವರಿದಿದ್ದು, ಬಸ್​, ರೈಲು ನಿಲ್ದಾಣ ಸೇರಿದಂತೆ ಎಲ್ಲಾ ಭಾಗಗಳಲ್ಲೂ ಪ್ರತಿಭಟನೆಯ ಕಾವು ಜೋರಾಗಿದೆ.

    ಇತ್ತ ಆರ್ಥಿಕ ಬಿಕ್ಕಟ್ಟು ಒಂದೆಡೆಯಾದರೆ ರಾಜಕೀಯ ಅಸ್ಥಿರತೆಯಿಂದಲೂ ಕಂಗಾಲಾಗಿರುವ ಶ್ರೀಲಂಕಾ 3 ಬಿಲಿಯನ್​ ಡಾಲರ್​​ ವಿದೇಶಿ ಸಾಲವನ್ನು ಕೇಳಿದೆ. ಆದರೆ ಸದ್ಯದ ಪರಿಸ್ಥಿತಿ ಅವಲೋಕಿಸಿದರೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗಿನ ಮಾತುಕತೆ ಫಲಪ್ರದವಾಗುವುದು ಕೂಡ ಅನುಮಾನವಿದೆ ಎಂದು ವಿಶ್ಲೇಷಿಸಲಾಗಿದೆ. (ಏಜೆನ್ಸೀಸ್​)

    ತಾಂತ್ರಿಕ ದೋಷದಿಂದ ಕಾವೇರಿ ನದಿಯ ನಡುವೆಯೇ ನಿಂತ ಬೋಟ್​! ಜನರ ಪರದಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts