More

    ರಸ್ತೆ ಕಾಮಗಾರಿ ಕಳಪೆ ಖಂಡಿಸಿ ಪ್ರತಿಭಟನೆ

    ಚಾಮರಾಜನಗರ: ತಾಲೂಕಿನ ಹಂಡ್ರಕಳ್ಳಿಮೋಳೆಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

    ಗ್ರಾಮದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ, ಚರಂಡಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಗುತ್ತಿಗೆದಾರ, ಇಂಜಿನಿಯರ್ ವಿರುದ್ಧ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

    ಗ್ರಾಪಂ ಮಾಜಿ ಸದಸ್ಯ ನಿಂಗರಾಜು ಮಾತನಾಡಿ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಅನುದಾನದಲ್ಲಿ ಹಂಡ್ರಕಳ್ಳಿಮೋಳೆ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ 70 ಲಕ್ಷ ರೂ. ಅನುದಾನ ನೀಡಿದ್ದರು. ಆದರೆ, ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೇರಿಕೊಂಡು ರಸ್ತೆ ಹಾಗೂ ಚರಂಡಿಯನ್ನು ಕಳಪೆಯಿಂದ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

    ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಯಿಂದ ಕಲುಷಿತ ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಲ್ಲುವ ಮೂಲಕ ಗಬ್ಬು ನಾರುತ್ತಿದ್ದು ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಕ್ರಿಯಾಯೋಜನೆಯಂತೆ ಸಿಸಿ ಚರಂಡಿ, ರಸ್ತೆ ನಿರ್ಮಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪರಿಶೀಲಿಸಿ ಕಳಪೆ ಕಾಮಗಾರಿ ಮಾಡಿರುವ ಇಂಜಿನಿಯರ್ ಅವರನ್ನು ಅಮಾನತುಗೊಳಿಸಬೇಕು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಯಜಮಾನರಾದ ನಿಂಗಶೆಟ್ಟಿ, ಬಸವಶೆಟ್ಟಿ, ಸೋಮಣ್ಣ, ಮುಖಂಡರಾದ ಮಹದೇವಶೆಟ್ಟಿ, ನಂಜಶೆಟ್ಟಿ, ಮಹದೇವಶೆಟ್ಟಿ, ಮಂಜು, ಸಿದ್ದರಾಜು ಇತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts