More

    ಬಿಜೆಪಿ ಕಾರ್ಯಕರ್ತ ಎನ್ನಲು ಹೆಮ್ಮೆ; ಆರ್.ಎಸ್. ಪಾಟೀಲ ಕುಚಬಾಳ

    ವಿಜಯಪುರ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಎಂದು ಹೇಳಿಕೊಳ್ಳುವುದೇ ಒಂದು ಹೆಮ್ಮೆ. ಬಿಜೆಪಿಯಲ್ಲಿ ಸೇವೆ ಮಾಡುವವರು ದೇಶ ಸೇವೆಯ ಭಾವನೆ ಹೊಂದುತ್ತಾರೆಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು.

    ನಗರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ರಾಷ್ಟ್ರೀಯತೆಯನ್ನೇ ಧ್ಯೇಯವಾಗಿಸಿಕೊಂಡಿದೆ. ಇಲ್ಲಿರುವ ಪ್ರತಿಯೊಬ್ಬರೂ ದೇಶಾಭಿಮಾನವನ್ನೇ ಉಸಿರಾಡುತ್ತಿದ್ದಾರೆ. ಹೀಗಾಗಿ ಪಕ್ಷ ಸೇರ್ಪಡೆಗೊಳ್ಳುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

    ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ನೂತನ ಜಿಲ್ಲಾ ಉಪಾಧ್ಯಕ್ಷ ಉಮೇಶ ಕೋಳಕೂರ ಮಾತನಾಡಿ, ಭಾರತೀಯ ಜನ ಪಕ್ಷದಲ್ಲಿ ಜವಾಬ್ದಾರಿ ತೆಗೆದುಕೊಳ್ಳುವುದೆಂದರೆ ಭಾರತೀಯ ಸೇನೆಯಲ್ಲಿ ಜವಾಬ್ದಾರಿ ತೆಗೆದುಕೊಂಡಂತೆ. ದೇಶ ಸೇವಕನಂತೆ ಕೆಲಸ ಮಾಡುವುದು ಎಲ್ಲಿಲ್ಲದ ಹೆಮ್ಮೆಯ ಸಂಗತಿ. ಕಳೆದ ಹಲವು ವರ್ಷಗಳಿಂದ ಪಕ್ಷದಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳು, ಸೇವೆಯನ್ನು ಪರಿಗಣಿಸಿ ಪಕ್ಷ ಹೊಸ ಜವಾಬ್ದಾರಿ ನೀಡಿದೆ. ಮುಂಬರುವ ಲೋಕ ಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಮೂಲಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ವಾಗ್ದಾನ ಮಾಡಿದರು.

    ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಮಾತನಾಡಿ, ದೇಶಾಭಿಮಾನ, ದೇಶದ ಪ್ರಗತಿಯನ್ನೇ ಉಸಿರಾಗಿಸಿಕೊಂಡಿರುವ ಹೆಮ್ಮೆಯ ಪಕ್ಷ ಬಿಜೆಪಿ. ದೇಶದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಬೇಕಿದೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಪ್ಪು ಹಣದ ವಿರುದ್ದ ಸಮರ, ಕಿಸಾನ್ ಸಮ್ಮಾನ್ ಮೊದಲಾದ ಯೋಜನೆಗಳು ಜನಸಾಮಾನ್ಯರಿಗೆ ಮುಟ್ಟಿವೆ, ಈ ರೀತಿಯ ಅಭಿವೃದ್ಧಿ ಪರಂಪರೆ ಮುಂದುವರೆಯಲು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಶ್ರಮಿಸಬೇಕು ಎಂದರು.

    ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾತನಾಡಿದರು. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಾಬು ಮಾಶಾಳ, ಈರಣ್ಣ ರಾವೂರ, ಮಲ್ಲನಗೌಡ ಪಾಟೀಲ, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಸಪ್ನಾ ಕಣ್ಮುಚ್ಚಿನಾಳ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts