More

  ಗ್ರಾಮೀಣ ಪ್ರದೇಶಕ್ಕೆ ಹೆಚ್ಚುವರಿ ಬಸ್ ಕಲ್ಪಿಸಿ

  ಶ್ರೀರಂಗಪಟ್ಟಣ: ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಕಂಟ್ರೋಲರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

  ಮರವೇ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಮಾತನಾಡಿ, ತಾಲೂಕಿನ ಚಿಂದಗಿರಿಕೊಪ್ಪಲು ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ನಿಗದಿತ ಸಮಯಕ್ಕೆ ಬಸ್‌ಗಳು ಬಾರದ ಕಾರಣ ಚಿಂದಗಿರಿಕೊಪ್ಪಲು, ಬಲ್ಲೇನಹಳ್ಳಿ, ಹನುಮಂತನಗರ ಹಾಗೂ ಕೂಡಲಕುಪ್ಪೆ ಗ್ರಾಮಗಳ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಸಕಾಲದಲ್ಲಿ ತೆರಳಲು ಸಾಧ್ಯವಾಗುತ್ತಿಲ್ಲ. ಟಿ.ಎಂ.ಹೊಸೂರು ಹಾಗೂ ರಾಂಪುರ ಮಾರ್ಗದಲ್ಲೂ ಇದೇ ಸಮಸ್ಯೆ ಎದುರಾಗಿದೆ. 1 ಬಸ್‌ನಲ್ಲಿ 3 ಬಸ್‌ಗಳಷ್ಟು ಜನರು ಪ್ರಯಾಣಿಸಬೇಕಾದ ದುಸ್ಥಿತಿ ಎದುರಾಗಿದೆ. ಆದ್ದರಿಂದ ಹೆಚ್ಚುವರಿ ಬಸ್‌ಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.

  ಇದಕ್ಕೆ ಪ್ರತಿಕ್ರಿಯಿಸಿದ ಟ್ರಾಫಿಕ್ ಕಂಟ್ರೋಲರ್, ಬಸ್ ಸಮಸ್ಯೆ ಬಗ್ಗೆ ಮೈಸೂರಿನ ಸಾತಗಹಳ್ಳಿ ಸಾರಿಗೆ ಡಿಪೋ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ದೂರವಾಣಿಯಲ್ಲಿ ಡಿಪೋ ವ್ಯವಸ್ಥಾಪಕರೊಂದಿಗೆ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು. ಮರವೇ ವೇದಿಕೆ ಕಾರ್ಯದರ್ಶಿ ಜಗದೀಶ್, ನಿರ್ದೇಶಕ ಜ್ಞಾನೇಶ್, ಪ್ರಕಾಶ್, ಶಿವಣ್ಣ, ಕೆಂಚೇಗೌಡ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts