More

    ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ

    ರಾಯಚೂರು: ಗ್ರಾಮಸ್ಥರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸಿಪಿಐಎಂ ನೇತೃತ್ವದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.
    ಗ್ರಾಮದಲ್ಲಿ ಕೆಲವು ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದರೂ ಗ್ರಾ.ಪಂ. ಸೂಕ್ತ ಕ್ರಮಕೈಗೊಳ್ಳುವಲ್ಲಿ ವಿಲವಾಗಿದೆ. ಗ್ರಾಮದಲ್ಲಿನ ಕೆಟ್ಟಿರುವ ಕೊಳವೆಬಾವಿಗಳನ್ನು ದುರಸ್ತಿಗೊಳಿಸಬೇಕು. ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಒದಗಿಸಬೇಕು.
    ಜಿಲ್ಲೆಯಲ್ಲಿ ತೀವ್ರ ಬರ ಸ್ಥಿತಿ ಇರುವುದರಿಂದ ಜನರು ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಿ ನಿಗದಿತ ಅವಯಲ್ಲಿ ಕೂಲಿ ಪಾವತಿಸಬೇಕು.
    ಗ್ರಾಮದಲ್ಲಿನ ರಸ್ತೆಗಳು ಹಾಳಾಗಿದ್ದು, ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸಿ, ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಕಾರಿಗಳಾದ ರಂಗಪ್ಪ ಯಾಪಲದಿನ್ನಿ, ವೆಂಕಟೇಶ ದಾಸರಿ, ಶಿವಾಚಾರ್ಯ, ಈರೇಶ, ಕುರುಮಯ್ಯ, ರಮೇಶ ಹಾಗೂ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts