More

    ಸಮರ್ಪಕವಾಗಿ ವಿದ್ಯುತ್ ಪೂರೈಸಿ

    ಶೃಂಗೇರಿ: ತಾಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ಅಗತ್ಯವಾಗಿದೆ. ನಿಗದಿತ ಸಮಯದಲ್ಲಿ ಮೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಿದ್ದು, ಉಳಿದ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾದಂತೆ ನೋಡಿಕೊಳ್ಳಬೇಕು ಎಂದು ಮಲೆನಾಡು ನಾಗರಿಕರ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ ಹೇಳಿದರು.

    ಮಲೆನಾಡು ನಾಗರಿಕರ ಹಕ್ಕುಗಳ ಹೋರಾಟ ಸಮಿತಿಯಿಂದ ಬುಧವಾರ ಶೃಂಗೇರಿ ಮೆಸ್ಕಾಂ ಎಇಇ ದೀಪಕ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಲೋ-ವೋಲ್ಟೇಜ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಮೋಟಾರ್‌ಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
    ಸಮಿತಿ ಕೋಶಾಧ್ಯಕ್ಷ ಆಗುಂಬೆ ಗಣೇಶ್ ಹೆಗಡೆ ಮಾತನಾಡಿ, ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಸಂಜೆ ಮತ್ತು ರಾತ್ರಿ ವಿದ್ಯುತ್ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.
    ಎಇಇ ದೀಪಕ್ ಮಾತನಾಡಿ, ಸಾಯಂಕಾಲ 6 ಗಂಟೆಯಿಂದ ರಾತ್ರಿ 10ರ ತನಕ ಎಲ್ಲ ಮಾರ್ಗದಲ್ಲಿ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ಮಾಡಲು ಮೇಲಾಧಿಕಾರಿಗಳು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಇಲಾಖೆ ಸ್ಪಂದಿಸುತ್ತದೆ ಎಂದು ತಿಳಿಸಿದರು.
    ಸಮಿತಿ ಕಾರ್ಯದರ್ಶಿ ಕೆ.ಎಸ್.ರಮೇಶ್, ಸಂಚಾಲಕ ತನಿಕೋಡು ಶ್ರೀನಿವಾಸ್ ನಾಯ್ಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts