ಗುಂಡ್ಲುಪೇಟೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರ ಕೂಡಲೇ ಎಚ್ಚೆತ್ತು ಮಹಿಳೆಯರು, ಯುವತಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಮಂಗಳವಾರ ಸಂಘಟನೆಯ ಚಾಮರಾಜನಗರ ಜಿಲ್ಲಾಧ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ತೆರಳಿದ ಸದಸ್ಯರು, ಹುಬ್ಬಳ್ಳಿಯ ನೇಹಾ ಹಿರೇಮಠ ಮತ್ತು ರುಕ್ಸಾನ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ತುರ್ತು ಗಮನಹರಿಸಿ ಸಿಬಿಐಗೆ ವಹಿಸಬೇಕು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಮನವಿಯನ್ನು ತಹಸೀಲ್ದಾರ್ ಮಂಜುನಾಥ್ ಅವರಿಗೆ ಸಲ್ಲಿಸಿದರು.
ಸಂಘಟನೆಯ ಪದಾಧಿಕಾರಿಗಳಾದ ಮಂಜು, ರಿಯಾಜ್, ನಾಗೇಶ್ ಮತ್ತಿತರರಿದ್ದರು.