More

    ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ ನೀಡಿ

    ಹಾನಗಲ್ಲ: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕು ತಹಸೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಮೂಲಕ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
    ಹುಮ್ನಾಬಾದ ತಹಸೀಲ್ದಾರ್ ಡಾ. ಪ್ರದೀಪಕುಮಾರ ಹಿರೇಮಠ ಕರ್ತವ್ಯದ ಮೇಲಿದ್ದಾಗ ದಲಿತ ಸಂಘರ್ಷ ಸಮಿತಿ ಸದಸ್ಯರು ಕಚೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿ, ಪೀಠೋಪಕರಣ ಧ್ವಂಸಗೊಳಿಸಿರುವುದನ್ನು ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಮೇಲೆ ಮೇಲಿಂದ ಮೇಲೆ ಇಂಥ ಅಹಿತಕರ ಘಟನೆಗಳು ಮರುಕಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರು ಯಾವುದೇ ಭಯವಿಲ್ಲದೇ ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ಸೃಷ್ಟಿಯಾಗಬೇಕು ಎಂದು ಆಗ್ರಹಿಸಿದ್ದಾರೆ.
    ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ಎಂ. ಪಾಟೀಲ, ಗೌರವಾಧ್ಯಕ್ಷ ವಿ.ಆರ್. ಪಾಟೀಲ, ಕಾರ್ಯದರ್ಶಿ ಎಸ್.ಕೆ. ದೊಡ್ಡಮನಿ, ಖಜಾಂಚಿ ಎನ್.ವಿ. ಅಗಸನಹಳ್ಳಿ, ಉಪಾಧ್ಯಕ್ಷ ಸಿ.ಸಿ. ಕದಂ, ರಾಜ್ಯ ಪರಿಷತ್ ಸದಸ್ಯ ನಾಗರಾಜ ಬಂಡಿವಡ್ಡರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯೇಂದ್ರ ಯತ್ನಳ್ಳಿ, ಕಂದಾಯ ನಿರೀಕ್ಷಕ ಎಸ್.ಎಂ. ಯತ್ತಿನಹಳ್ಳಿ, ಶಿವಾನಂದ ಕೊಟಗಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts