ಎಲ್ಲ ಬಡ ವಿದ್ಯಾರ್ಥಿಗಳಿಗೆ ಬಸ್​ಪಾಸ್ ಸೌಲಭ್ಯ ಕಲ್ಪಿಸಿ

ಹಾವೇರಿ: ಎಸ್​ಸಿ, ಎಸ್​ಟಿ ಸೇರಿ ಎಲ್ಲ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಸರ್ಕಾರಿ ಮಹಿಳಾ ಕಾಲೇಜ್​ನ ವಿದ್ಯಾರ್ಥಿನಿಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

2018-19ನೇ ಸಾಲಿನ ಬಜೆಟ್​ನಲ್ಲಿ ರಾಜ್ಯ ಸರ್ಕಾರ ಎಸ್​ಸಿ, ಎಸ್​ಟಿ ಸೇರಿ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡುವುದಾಗಿ ಘೊಷಣೆ ಮಾಡಿತ್ತು. ಆದರೆ, ಇವತ್ತಿನವರೆಗೂ ಯೋಜನೆ ಜಾರಿ ಮಾಡಿಲ್ಲ. ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜ್​ಗಳ ಡೊನೇಷನ್ ಹಾವಳಿಯಿಂದಾಗಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಬಸ್​ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲ ವರ್ಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡಬೇಕು ಎಂದು ಒತ್ತಾಯಿಸಿದರು.

ಕೂಡಲೆ ಮುಖ್ಯಮಂತ್ರಿಗಳು ಉಚಿತ ಬಸ್​ಪಾಸ್ ಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಮತ್ತಷ್ಟು ತೀವ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು. ನಂತರ ತಹಸೀಲ್ದಾರ್ ಎಚ್.ಸಿ. ಶಿವಕುಮಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿ ಮುಖಂಡರಾದ ಮೇಘನಾಥ, ವಿಶ್ವನಾಥ, ಪವನ ಬೊಮ್ಮಣ್ಣನವರ, ಗಂಗಾಧರ, ಕಿರಣ, ಪ್ರಶಾಂತ, ವೀಣಾ ಪಾಟೀಲ, ತೇಜಸ್ವಿನಿ ಸೇರಿ ಸರ್ಕಾರಿ ಮಹಿಳಾ ಪಪೂ ಕಾಲೇಜ್ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿದ್ದರು.

ಎಬಿವಿಪಿಯಿಂದ ಪ್ರತಿಭಟನೆ

ಹಿರೇಕೆರೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೂಡಲೆ ಉಚಿತ ಬಸ್​ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ವಿದ್ಯಾರ್ಥಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಸಂಗಮೇಶ್ವರ ಕಾಲೇಜ್​ನಿಂದ ಹೊರಟ ಪ್ರತಿಭಟನಾಕಾರರ ಮೆರವಣಿಗೆ, ಸರ್ವಜ್ಞ ವೃತ್ತದಿಂದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿ ಸೇರಿ, ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ನಂತರ ತಹಸೀಲ್ದಾರ್ ರಿಯಾಜುದ್ದಿನ್ ಭಾಗವಾನ್ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ತಾಲೂಕು ಸಂಚಾಲಕ ಹಾಲೇಶ ಹಲಗೇರಿ, ಎಬಿವಿಪಿ ನಗರ ಕಾರ್ಯದರ್ಶಿ ಮಂಜುನಾಥ ಕೊಳ್ಳೇರ, ವೀರೇಶ ಪೂಜಾರ, ಮಾಲತೇಶ ಮತ್ತೂರ, ಶ್ರೀಕಾಂತ ಕೊಲ್ಲಾಪುರ, ಸುನೀಲ, ಸಂಜೀವ ರ್ಬಾ, ಶಶಾಂಕ ಹಳ್ಳೂರ, ವಿನಾಯಕ ಮಡಿವಾಳರ ಸೇರಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *