More

    ರೈತರ ಪಂಪ್‌ಸೆಟ್‌ಗೆ ನಿರಂತರ ವಿದ್ಯುತ್ ನೀಡಿ

    ರಾಯಚೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಮೂರು ೇಸ್ ವಿದ್ಯುತ್ ಸರಬರಾಜು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜೆಸ್ಕಾಂ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿಗೆ ಮನವಿ ಸಲ್ಲಿಸಿ, ಮುಂಗಾರು ವಿಲವಾಗಿ ರೈತರು ಬೆಳೆದಿರುವ ಬೆಳೆದಿರುವ ಬೆಳೆಗಳು ಒಣಗುತ್ತಿದ್ದು, ಅನಿಯಮಿತ ವಿದ್ಯುತ್ ಕಡಿತದಿಂದ ರೈತರು ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
    ಈ ಹಿಂದೆ ರೈತರ ಪಂಪ್‌ಸೆಟ್‌ಗೆ 12 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಈಗ ಮುರ‌್ನಾಲ್ಕು ಗಂಟೆಗಳ ಕಾಲವೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಇದರಿಂದಾಗಿ ರೈತರು ಸಂಕಷ್ಟ ಎದುರಿಸುವಂತಾಗಿದ್ದು, ಏಳು ಗಂಟೆ ಮೂರು ೇಸ್ ವಿದ್ಯುತ್ ಸರಬರಾಜು ಮಾಡಿ ಬೆಳೆಗಳನ್ನು ಉಳಿಸಬೇಕು.
    ಸೌರ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ಕಡ್ಡಾಯ ವಿದ್ಯುತ್ ಉತ್ಪಾದನೆಗೆ ಸೂಚನೆ ನೀಡಬೇಕು. ಅನಗತ್ಯ ವಿದ್ಯುತ್ ಪೋಲಾಗುತ್ತಿರುವುದನ್ನು ತಡೆಯಬೇಕು.
    ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರ ಪ್ರಾರಂಭಿಸಬೇಕು. ಸುಟ್ಟು ಹೋಗಿರುವ ವಿದ್ಯುತ್ ಪರಿವರ್ತಕಗಳನ್ನು ನಿಗದಿತ ಅವಯಲ್ಲಿ ದುರಸ್ತಿಗೊಳಿಸಬೇಕು. ಶಾಖೋತ್ಪನ್ನ ವಿದ್ಯುತ್ ಕೇಂದ್ರ ಸ್ಥಾಪನೆಗೆ ಭೂಮಿ ನೀಡಿದ ರಾಯಚೂರು ತಾಲೂಕಿಗೆ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಪದಾಕಾರಿಗಳಾದ ಬೂದಯ್ಯಸ್ವಾಮಿ, ಬಸವರಾಜ, ಲಿಂಗಾರೆಡ್ಡಿ ಪಾಟೀಲ್, ಚಂದಾವಲಿ, ಮಲ್ಲಣ್ಣ ಗೌಡೂರು, ದೇವರಾಜ ನಾಯಕ, ಹಾಜಿ ಮಸ್ತಾನ್, ಎಚ್.ಶಂಕ್ರಪ್ಪ, ಗೋವಿಂದ ನಾಯಕ, ಬ್ರಹ್ಮಯ್ಯ ಆಚಾರ್, ರವಿಕುಮಾರ, ಸಿದ್ದಯ್ಯಸ್ವಾಮಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts