More

    ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾನದಂಡದಂತೆ ಬೆಳೆ ನಷ್ಟ ಪರಿಹಾರ ನೀಡಿ

    ಬೆಂಗಳೂರು: ರೈತರಿಗೆ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾನದಂಡದಂತೆ ಬರ ಪರಿಹಾರ ನೀಡುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ.

    ರೈತ ಮುಖಂಡರ ನಿಯೋಗ ಮುಖ್ಯ ಕಾರ್ಯದರ್ಶಿ ರಜನೀಶ್ ಗೂಯಲ್ ಅವರನ್ನು ಭೇಟಿ ಮಾಡಿ ರಾಜ್ಯದ ಬರಗಾಲದ ರೈತರ ಸಮಸ್ಯೆಯ ಬಗ್ಗೆ ಚರ್ಚಿಸಿತು. ಮುಖ್ಯ ಕಾರ್ಯದರ್ಶಿಗಳು ಕಂದಾಯ ಕೃಷಿ, ನೀರಾವರಿ. ವಿದ್ಯುತ್. ಕಬ್ಬು ಅಭಿವೃದ್ಧಿ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಏರ್ಪಾಟು ಮಾಡುವಂತೆ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಿಯೋಗದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರ್ ಶಾಂತಕುಮಾರ್, ಬರಡನಪುರ ನಾಗರಾಜ್. ಧರ್ಮರಾಜ್, ಮಾದಪ್ಪ ಇದ್ದರು.
    ರೈತ ಸಂಘದ ನಿಯೋಗ, ರಾಜ್ಯಾದಲ್ಲಿ 224 ತಾಲೂಕುಗಳನ್ನು ಬರ ಎಂದು ೋಷಿಸಿ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ 2000 ರೂ. ನೀಡಲಾಗಿದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗಿಲ್ಲ. ಸರ್ಕಾರ ತಕ್ಷಣ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದೆ.

    ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರಿಗೆ ಮೇವಿನ ಸಮಸ್ಯೆ ಕಾಡುತ್ತಿದೆ. ಕೃಷ್ಣಾ ನದಿಯಿಂದ ಈ ಭಾಗದ ರೈತರಿಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕೂಡಲೇ ಮಹಾರಾಷ್ಟ್ರ ಸರ್ಕಾರದ ಗಮನ ಸೆಳೆದು ರೈತರನ್ನು ರಕ್ಷಿಸಿ ಎಂದು ಕೇಳಿಕೊಂಡಿತು.

    ತೆಂಗು, ಕಬ್ಬು ಬೆಳೆ ಒಣಗುತ್ತಿದೆ. ಕಾಡಂಚಿನ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಕಾಡು ಪ್ರಾಣಿಗಳು ಹಳ್ಳಿಗಳಿಗೆ ಬಂದು ನೀರು ಕುಡಿದು ಬೆಳೆ ತಿಂದು ನಾಶ ಮಾಡುತ್ತಿವೆ. ಬೆಳೆ ವಿಮೆ ನೋಂದಣಿ ಮಾಡಿಕೊಂಡಿರುವ ರೈತರಿಗೆ ಪರಿಹಾರ ಹಣ ಬಂದಿಲ್ಲ. ಇದಕ್ಕೆ ಯಾವುದೇ ಕಂಪನಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ. ಭೀಕರ ಬರದ ಕಾರಣ ಮುಂದಿನ ಕೃಷಿ ಚಟುವಟಿಕೆ ನಡೆಸಲು ಎಲ್ಲ ಬ್ಯಾಂಕ್‌ಗಳಲ್ಲಿ ಬಡ್ಡಿ ರಹಿತ ಸಾಲ ನೀಡಲು ಸೂಕ್ತ ನಿರ್ದೇಶನ ನಿಡಬೇಕು.
    ರೈತರ ಕೃಷಿ ಸಾಲಕ್ಕೆ ಎಲ್ಲ ಬ್ಯಾಂಕ್‌ಗಳಲ್ಲಿ ಸಿಬಿಲ್ ಸ್ಕೋರ್ ಕೇಳುವುದನ್ನು ರದ್ದು ಮಾಡಬೇಕು. ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ವಸೂಲಿ ತಪ್ಪಿಸಬೇಕು ಎಂದು ಮನವಿ ಮಾಡಿಕೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts