
ಹರಪನಹಳ್ಳಿ: ಗ್ರಂಥಾಲಯಕ್ಕೆ ಬರುವ ಓದುಗರಿಗೆ ಪುಸ್ತಕಗಳ ಜತೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅರ್‌ಡಿಪಿಆರ್ ಸಮೂಹ ಸಂಪನ್ಮೂಲ ವ್ಯಕ್ತಿ ಮೀನಾಕ್ಷಿ ಹೇಳಿದರು.
ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತಿ ಇಲಾಖೆ ಹಾಗೂ ಅಬ್ದುಲ್ ನಜೀರ್ ಸಾಬ್ ಮೈಸೂರು ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಂಥಾಲಗಳ ಅಬಿವೃದ್ಧಿ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಗ್ರಂಥಾಲಯಗಳಲ್ಲಿ ಸರ್ಕಾರ ಡಿಜಟಲೀಕರಣ ಅಳವಡಿಸಿದ್ದು, ವಿಕಲಚೇತನ, ಬಡ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸರ್ಕಾರದ ಜಾತಿವಾರು ಸೌಲಭ್ಯಗಳ ಬಗ್ಗೆ ನೀಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿರುವ ಯುವಕರಿಗೆ ಸರ್ಕಾರದ ಅರ್ಜಿಗಳ ಕುರಿತು, ಮಕ್ಕಳಿಗೆ ಕಂಪ್ಯೂಟರ್ ಬಳಕೆ ಬಗ್ಗೆ ಹೇಳಬೇಕು. ಸಾಂಕ್ರಮಿಕ ಕಾಯಿಲೆಗಳ ಅರಿವು ಮೂಡಿಸಬೇಕು ಎಂದರು.
TAGGED:ಗ್ರಂಥಾಲ