More

    ಕಾರ್ಯಕರ್ತೆಯರಿಗೆ ಜೀವನ ಭದ್ರತೆ ಒದಗಿಸಿ

    ತರೀಕೆರೆ: ಗೌರವಧನ ಹೆಚ್ಚಳ, ಜೀವನ ಭದ್ರತೆಗೆ ಬೇಕಾದ ಯೋಜನೆ ಅನುಷ್ಠಾನ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಸದಸ್ಯರು ಬುಧವಾರ ಶಾಸಕರ ಕಚೇರಿ ಎದುರು ಧರಣಿ ನಡೆಸಿದರು.

    ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಪಿ.ಕಲಾ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅನುಕೂಲವಾಗುವಂಥ ಯಾವುದೇ ಯೋಜನೆ ಘೋಷಿಸಿಲ್ಲ. ಕಳೆದ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ್ದ 6ನೇ ಗ್ಯಾರಂಟಿ ಈಡೇರದಿರುವುದು ಸಿಬ್ಬಂದಿಗೆ ನಿರಾಸೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಈ ಹಿಂದೆ ಕೊಟ್ಟಿದ್ದ ಮಾತಿನಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ., ಸಹಾಯಕಿಯರಿಗೆ 10 ಸಾವಿರ ರೂ. ಗೌರವ ಧನ ಹೆಚ್ಚಿಸುವುದು, 3 ಲಕ್ಷ ರೂ. ಇಡಗಂಟು ನೀಡಬೇಕು. ಜತೆಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕೆಂದು ಎಂದು ಒತ್ತಾಯಿಸಿದರು.
    ತಾಲೂಕು ಅಧ್ಯಕ್ಷೆ ಕೆ.ಎಸ್.ಸವಿತಾ, ಗೌರವಾಧ್ಯಕ್ಷೆ ಯಶೋದಮ್ಮ, ಸಹ ಕಾರ್ಯದರ್ಶಿ ನಳಿನಾ, ಖಜಾಂಚಿ ಸರಸ್ವತಿ, ಸದಸ್ಯರಾದ ಸಾವಿತ್ರಿ, ರುದ್ರಮ್ಮ, ಶಾಂತಾ, ರಾಣಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts