More

    ಬಡ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ 6000 ರೂ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸೋನಿಯಾ ಗಾಂಧಿ

    ನವದೆಹಲಿ: ಕರೊನಾ ಸಂಕಷ್ಟದ ಈ ಸಮಯದಲ್ಲಿ ಬಡ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ ಆರು ಸಾವಿರ ರೂಪಾಯಿ ಹಣಕಾಸಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

    ದೇಶದ ಕರೊನಾ ಪರಿಸ್ಥಿತಿ ಬಗ್ಗೆ ತಮ್ಮ ಪಕ್ಷದ ಮುಖಂಡರ ಸಭೆ ನಡೆಸಿದ ಅವರು ಕರೊನಾ ಪರಿಸ್ಥಿತಿಯಿಂದ ಅನೇಕ ಬಡ ಕುಟುಂಬಗಳು ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಮಯದಲ್ಲಿ ಮತ್ತೆ ಕೋವಿಡ್ ಅಲೆ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬಗಳ ನೆರವಿಗೆ ಧಾವಿಸಬೇಕಿರುವುದು ಸರ್ಕಾರದ ಆದ್ಯ ಕರ್ತವ್ಯ. ನಾವು ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬಂದಂತೆ, ಅಶಕ್ತ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 6 ಸಾವಿರ ರೂಪಾಯಿ ಹಣಕಾಸಿನ ನೆರವನ್ನು ಸರ್ಕಾರ ನೀಡಬೇಕು. ಇದು ಕಡ್ಡಾಯ ಎಂದು ಅವರು ಒತ್ತಾಯಿಸಿದ್ದಾರೆ.

    ಕೋವಿಡ್​ನಿಂದ ಈಗಾಗಲೇ ಒಂದು ವರ್ಷ ಭಾರತ ನರಳಿದ್ದಲ್ಲದೇ ಈಗ ಮತ್ತೆ ಸಂಕಷ್ಟಕ್ಕೆ ಸಿಕ್ಕಿ ಬಿದ್ದಿದೆ. ನಮ್ಮ ಸಲಹೆ ಸೂಚನೆಗಳನ್ನು ಕೇಂದ್ರ ಸರ್ಕಾರ ಕಡೆಗಣಿಸಿರುವುದು ಸ್ಪಷ್ಟವಾಗಿ ಎದ್ದು ತೋರುತ್ತದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

    ದೇಶಾದ್ಯಂತ ಕೋವಿಡ್ ರೋಗಿಗಳಿಗೆ ಹಾಸಿಗೆ, ಆಕ್ಸಿಜನ್ ಹಾಗೂ ಲಸಿಕೆ ಕೊರತೆ ಕಾಡುತ್ತಿದೆ. ಈ ಬಗ್ಗೆ ನಾವು ಆಗಾಗ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದರೂ ಅದು ದಿವ್ಯ ನಿರ್ಲಕ್ಷ್ಯ ತಾಳಿರುವುದು ದುರಾದೃಷ್ಟಕರ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಭಾಗವಹಿಸಿದ್ದರು. (ಏಜೇನ್ಸಿಸ್).

    ಕುಂಭಮೇಳವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದ ಸ್ವಾಮಿ ಅವದೇಶಾನಂದ ಗಿರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts