More

    ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಗುಣಮಟ್ಟದ ಊಟ ನೀಡಿ

    ರಾಯಚೂರು: ನಗರದಲ್ಲಿನ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.


    ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ರಕ್ಷಣೆ ನೀಡುವಲ್ಲಿ ನಿರ್ಲಕ್ಷೃ ವಹಿಸಿರುವ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ವಸತಿ ನಿಲಯದಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳು ಸ್ನಾನ ಮತ್ತು ಶೌಚಕ್ಕೆ ಹೋಗಲು ಸಮಸ್ಯೆ ಎದುರಿಸುವಂತಾಗಿದೆ. ಕಳಪೆ ಊಟ ನೀಡಲಾಗುತ್ತಿದ್ದು, ನಿಗದಿಪಡಿಸಿರುವಂತೆ ಅಡುಗೆ ಮಾಡುತ್ತಿಲ್ಲ ಎಂದು ದೂರಿದರು.

    ಇದನ್ನೂ ಓದಿ: ರಾತ್ರಿ ಊಟ ಮಾಡಿ ಮಲಗಿದ್ದ ಬಾಲಕಿ ಬೆಳಗ್ಗೆ ಅಸ್ವಸ್ಥ; ಮುರಾರ್ಜಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು!

    ವಸತಿ ನಿಲಯಕ್ಕೆ ಸಮರ್ಪಕ ನೀರು ಪೂರೈಸಬೇಕು. ಬಿಸಿ ನೀರು ಸರಬರಾಜು ಮಾಡಲು ಸೋಲಾರ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯ ಸೌಲಭ್ಯ ಕಲ್ಪಿಸಬೇಕು. ಕಟ್ಟಡದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು. ವಿದ್ಯಾರ್ಥಿಗಳಿಗೆ ಮಂಚ, ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಲಾಯಿತು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts