More

    ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ವ್ಹೀಲ್‌ಚೇರ್ ವ್ಯವಸ್ಥೆ

    ಕೆ.ಎಂ.ದೊಡ್ಡಿ: ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಮಂಜುನಾಥ್ ಕರೆ ನೀಡಿದರು.

    ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಸಮೀಪದ ಮಣಿಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹದಿನೆಂಟು ವರ್ಷದವರಿಗೆ ಮತದಾನ ಮಾಡಲು ಸಂವಿಧಾನ ಮುಕ್ತ ಅವಕಾಶ ಕಲ್ಪಿಸಿದೆ. ಆದಾಗ್ಯೂ ಹಲವು ಕಾರಣಗಳಿಂದ ಮತದಾನದಿಂದ ದೂರ ಉಳಿಯುವ ನಾಗರಿಕರು ನಮ್ಮ ನಡುವೆ ಇದ್ದಾರೆ ಎಂದರು.

    ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಜತೆಗೆ ಅಂಗವಿಕಲರಿಗೂ ಮತ ಚಲಾಯಿಸಲು ಮತಗಟ್ಟೆಗಳಲ್ಲಿ ವ್ಹೀಲ್‌ಚೇರ್ ವ್ಯವಸ್ಥೆ ಮಾಡಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ನೋಂದಣಿ ಮಾಡಿಕೊಂಡು ಮನೆಯಿಂದಲೇ ಮತ ಚಲಾಯಿಸಬಹುದಾಗಿದೆ ಎಂದರು.

    ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಟಿ.ವಿ. ಮಂಜುನಾಥ್, ಪ್ರಾಂಶುಪಾಲ ಡಾ.ಬರಗೂರಪ್ಪ ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದವರು ಪ್ರತಿಜ್ಞೆ ಸ್ವೀಕಾರ ಮಾಡಿದರು. ಪಿಡಿಒ ಎನ್.ಸುಧಾ, ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಉಮೇಶ್, ಡಾ.ರಮ್ಯಾ ಡಾ.ಶ್ರೀನಿವಾಸ್, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಅಮೃತ್ ರಾಜ್, ಅಂಬರಹಳ್ಳಿ ಸ್ವಾಮಿ, ಪ್ರದೀಪ್, ಭಾವನಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts