More

    ಪಿಎಸ್‌ಐ ಪರೀಕ್ಷೆ: ಹೊರ ಜಿಲ್ಲೆಗಳ ಸಿಬ್ಬಂದಿ ನಿಯೋಜನೆ

    ಬೆಂಗಳೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮರು ಪರೀಕ್ಷೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳಿಗೆ ಬೆಂಗಳೂರಿನ ಹೊರಗಿನ ಸಿಬ್ಬಂದಿಯನ್ನು ರ‌್ಯಾಂಡಮ್ ಆಗಿ ನೇಮಕ ಮಾಡಲಾಗುತ್ತಿದೆ.

    ಇದೇ 23ರಂದು ಬೆಂಗಳೂರಿನ 117 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ವಸ್ತಸಂಹಿತೆ ನಿಗದಿ ಮಾಡಲಾಗಿದೆ. ಪರೀಕ್ಷೆಗೆ ಹಾಲ್ ಟಿಕೆಟ್ ಕೂಡ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

    ಹೈಕೋರ್ಟ್ ನಿರ್ದೇಶನದ ಮೇರೆಗೆ ಎರಡನೇ ಬಾರಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಮರು ಪರೀಕ್ಷೆಗೆ 55 ಸಾವಿರ ಅಭ್ಯರ್ಥಿಗಳು ನೇಮಕ ಮಾಡಿಕೊಂಡಿದ್ದಾರೆ. ಯಾವುದೇ ಲೋಪಗಳಿಲ್ಲದೆ ಪರೀಕ್ಷೆಯನ್ನು ನಡೆಸುವುದು ಕರ್ನಾಟಿಕ ಪರೀಕ್ಷಾ ಪ್ರಾಧಿಕಾರಕ್ಕೆ ಸವಾಲಾಗಿದೆ. ಹೀಗಾಗಿ, ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ.

    ಸಿಬ್ಬಂದಿಗೆ ತರಬೇತಿ: ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಬ್ಬಂದಿಗೆ ಸೋಮವಾರ (ಜ.22) ತರಬೇತಿ ನೀಡಿ, ಮಂಗಳವಾರ ಬೆಳಗ್ಗೆ ಯಾವ ಕೇಂದ್ರಗಳಿಗೆ ನಿಯೋಜನೆ ಮಾಡಬೇಕೆಂಬುದನ್ನು ರ‌್ಯಾಂಡಮೈಸನ್ ಮಾಡಿ ಕಳುಹಿಸಲಾಗುತ್ತದೆ. ಮಂಗಳವಾರ ಬೆಳಗ್ಗೆಯವರೆಗೂ ಯಾವ ಸಿಬ್ಬಂದಿ ಯಾವ ಕೇಂದ್ರಕ್ಕೆ ನೇಮಕವಾಗುತ್ತಾರೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಕೊನೇ ಘಳಿಗೆಯಲ್ಲಿ ಸಿಬ್ಬಂದಿಯನ್ನ ನಿಯೋಜಿಸಲಾಗುತ್ತದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

    200 ಮೀ. ನಿಷೇಧಾಜ್ಞೆ ೋಷಣೆ

    ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಜ.23 ರಂದು ಬೆಳಿಗ್ಗೆ 7 ಗಂಟೆಯಿಂದ ಪರೀಕ್ಷೆಯು ಮುಕ್ತಾಯಗೊಳ್ಳುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts