More

    ಸಿದ್ಧಗಂಗಾ ಮಠದ ಆವರಣದಲ್ಲಿ ಬಿ.ವೈ. ವಿಜಯೇಂದ್ರರ ಕಾಲಿಗೆ ಬಿದ್ದ ಪೊಲೀಸ್ ಹುದ್ದೆ​​ ಆಕಾಂಕ್ಷಿಗಳು…

    ತುಮಕೂರು: ಶನಿವಾರ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಈ ವೇಳೆ ಅಲ್ಲಿದ್ದ ಪೊಲೀಸ್​​ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು ತಮ್ಮ ಅಳಲನ್ನು ತೋಡಿಕೊಂಡರು.

    ಮಠಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು ಸಿದ್ಧಲಿಂಗಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ನಂತರ ಅಲ್ಲಿಂದ ಹೊರಬರುವಾಗ ಪೊಲೀಸ್​ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು, ಪೊಲೀಸ್ ಪೇದೆಯ ವಯೋಮಿತಿಯನ್ನು 25 ರಿಂದ 27 ಹಾಗೂ 27ರಿಂದ 29 ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಆಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts