ಪಿಎಸ್​ಐ ಹಗರಣದಲ್ಲಿ ಅಕ್ರಮವೆಸಗಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ: ಪ್ರತಾಪ್​ ಸಿಂಹ

Pratap Simha
Published on

ಮೈಸೂರು: ಪಿಎಸ್‌ಐ ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ.ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಪರೀಕ್ಷಾ ಪತ್ರಿಕೆಯನ್ನು ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ಮಾಡಿಸಿ.ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ.ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ಪಕ್ಷದವರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಕಷ್ಟಪಟ್ಟು ಓದುವವರ ಆತ್ಮ ವಿಶ್ವಾಸ ಕುಗ್ಗಿಸಬೇಡಿ, ಪರೀಕ್ಷೆಗಳು ಪಾರದರ್ಶಕವಾಗಿ ಇರಬೇಕು. 50 ಲಕ್ಷ ರೂ. ಕೊಟ್ಟು ಪಿಎಸ್‌ಐ ಆದವರು ಯಾವ ರೀತಿ ಕೆಲಸ ಮಾಡಬಹುದು. ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ.ಮೊದಲು ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net