ಪಿಎಸ್​​ಐ ನೇಮಕಾತಿ ಅಕ್ರಮ: ಜಾಮೀನು ಪಡೆದು ಹೊರಗಿದ್ದ ಆರೋಪಿ ನಾಪತ್ತೆ!

R D Patil
Published on

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಪ್ರಕರಣ ಮತ್ತಷ್ಟು ಸಂಕೀರ್ಣವಾಗುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ, ಈ ಪ್ರಕರಣದ ಆರೋಪಿಯೊಬ್ಬರು ಜಾಮೀನಿನ ಮೇಲೆ ಹೊರಬಂದು ನಾಪತ್ತೆಯಾಗಿದ್ದಾರೆ.

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರ್​.ಡಿ.ಪಾಟೀಲ್ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಆದರೆ ಈಗ ಈತ ನಾಪತ್ತೆಯಾಗಿದ್ದು, ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುವಂತಾಗಿದೆ.

ರಾಮಮೂರ್ತಿನಗರದ ಹಾಗೂ ತುಮಕೂರಿನ ಕ್ಯಾತ್ಸಂದ್ರದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​.ಡಿ.ಪಾಟೀಲ್​ ದಸ್ತಗಿರಿಗಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಆದರೆ ಜಾಮೀನಿನ ಮೇಲೆ ಹೊರಗಿರುವ ಈತ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿರುವುದಷ್ಟೇ ಅಲ್ಲದೆ, ಸಿಐಡಿ ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net