20.4 C
Bengaluru
Sunday, January 19, 2020

ಟಿಡಿ ಇಂಜೆಕ್ಷನ್​ನಿಂದ ಮಾನಸಿಕ ಆಘಾತ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಟೆಟಾನಸ್ ಡಿಫ್ತೀರಿಯಾ (ಟಿಡಿ) ವ್ಯಾಕ್ಸಿನ್ ಪಡೆದ ತಾಲೂಕಿನ ಹೆಬಸೂರು ಸರ್ಕಾರಿ ಬಾಲಕಿಯರ ಶಾಲೆಯ 28 ಮಕ್ಕಳು ಶುಕ್ರವಾರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಇಲ್ಲಿನ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.

ವಿಶೇಷ ಶಾಲಾ ಲಸಿಕಾ ಅಭಿಯಾನ ಅಡಿ 10ರಿಂದ 11 ವರ್ಷದ ಮಕ್ಕಳಿಗೆ ಈ ವ್ಯಾಕ್ಸಿನ್ ನೀಡಲಾಗುತ್ತಿದೆ. 5ನೇ ತರಗತಿಯ ಮಕ್ಕಳಿಗೆ ಶುಶ್ರೂಷಕರು ಊಟಕ್ಕಿಂತ ಮುನ್ನ ವ್ಯಾಕ್ಸಿನ್ ನೀಡಿದ್ದರು. ಸರತಿಯ ಐದನೇ ಸ್ಥಾನದಲ್ಲಿದ್ದ ದಿಯಾ ಅಕ್ಕಿ ಎನ್ನುವ ವಿದ್ಯಾರ್ಥಿನಿಗೆ ಸ್ವಲ್ಪ ಸಮಯದ ಬಳಿಕ ಹೊಟ್ಟೆಯಲ್ಲಿ ಸಂಕಟವಾಗಿತ್ತು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎನ್.ಡಿ. ಕರಲವಾಡ ಅವರನ್ನ ಕರೆಯಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ವ್ಯಾಕ್ಸಿನ್ ಪಡೆದಿದ್ದ 30ಕ್ಕೂ ಹೆಚ್ಚು ಮಕ್ಕಳು ಏನೋ ತೊಂದರೆಯಾಗುತ್ತಿದೆ ಎಂದರು. ಅವರಲ್ಲಿ 22 ಮಕ್ಕಳನ್ನು ಆಂಬುಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಕರೆತಂದು ಕಿಮ್ಸ್​ನ ಚಿಕ್ಕ ಮಕ್ಕಳ ವಿಭಾಗಕ್ಕೆ ದಾಖಲಿಸಲಾಯಿತು. ವಿಭಾಗ ಮುಖ್ಯಸ್ಥ ಡಾ. ಪ್ರಕಾಶ ವಾರಿ, ಡಾ. ವಿನೋದ ರಟಗೇರಿ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಯಿತು.

ಆತಂಕ ಹಾಗೂ ಸನ್ನಿಗೊಳಗಾದ ವಿದ್ಯಾರ್ಥಿ ಗಳು ಮತ್ತು ಪಾಲಕರನ್ನು ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಸಿ. ಅವರು ಸಮಾಧಾನ ಪಡಿಸಿದರು. ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಊಟಕ್ಕಿಂತ ಮೊದಲು ಮಕ್ಕಳಿಗೆ ಡಿಫ್ತೀರಿಯಾ ಇಂಜೆಕ್ಷನ್ ನೀಡಿದ್ದರಿಂದ ಹೀಗಾಗಿದೆ. ಎಲ್ಲ ಶಾಲಾ ಮಕ್ಕಳಿಗೆ ಊಟದ ನಂತರವೇ ಇಂಜೆಕ್ಷನ್ ಕೊಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ವ್ಯಾಕ್ಸಿನ್ ಕೊಟ್ಟ ನಂತರ ಮಕ್ಕಳು ಸ್ವಲ್ಪ ಆಘಾತಕ್ಕೊಳ ಗಾಗುವುದು ಸಹಜ. ಇದು ಅಡ್ಡ ಪರಿಣಾಮ ಅಲ್ಲ. ಈಗಾಗಲೇ ಜಿಲ್ಲಾದ್ಯಂತ 2 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗಿದೆ. ಟಿಡಿ ನೀಡುವುದರಿಂದ ಅಡ್ಡ ಪರಿಣಾಮವಾಗುವುದಿಲ್ಲ. ಮಕ್ಕಳನ್ನು ಒಬ್ಬೊಬ್ಬರಾಗಿ ಕೊಠಡಿಗೆ ಕರೆದು ವ್ಯಾಕ್ಸಿನ್ ಕೊಟ್ಟು, ಏನೂ ಆಗುವುದಿಲ್ಲ ಎಂದು ಧೈರ್ಯ ತುಂಬಿ ಕಳಿಸುವಂತೆ ಇಲಾಖೆ ಸಿಬ್ಬಂದಿಗೆ ಸೂಚಿಸಲಾಗುವುದು.

| ಡಾ. ಯಶವಂತ ಮದಿನಕರ, ಧಾರವಾಡ ಡಿಎಚ್​ಒ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...