ಕನಕದುರ್ಗಮ್ಮ ದೇವಸ್ಥಾನಕ್ಕೆ ಪಿಟಿಪಿ ಭೇಟಿ

ಬಳ್ಳಾರಿ: ನಗರದ ಆದಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಕುಟುಂಬ ಸಮೇತರಾಗಿ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿದ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಪತ್ನಿ, ಪುತ್ರ ವಿಶೇಷ ಪೂಜೆ ಸಲ್ಲಿಸಿ, ಆವರಣದಲ್ಲಿ ನೆಲಹಾಸು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿ ದೇವಸ್ಥಾನದ ಆಡಳಿತದಲ್ಲಿ ಲೋಪದೋಷಗಳು ಕೇಳಿ ಬರುತ್ತಿವೆ. ಇದನ್ನು ಸರಿದೂಗಿಸಲು ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿ, ಶೀಘ್ರದಲ್ಲಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.