ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ಪದವಿ ಪೂರ್ವ ಹಂತದ ಜಿಲ್ಲಾ ಉಪ ನಿರ್ದೇಶಕರ ಕಚೇರಿಯನ್ನು ‘ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)’ ಎಂದು ಹಾಗೂ ಪಿಯು ಕಾಲೇಜುಗಳನ್ನು ‘ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು)’ ಎಂದು ಮರುನಾಮೀಕರಣ ಮಾಡುವಂತೆ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
2023ರ ಜೂ.28ರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನದಲ್ಲಿ ಬರಲಿದೆ. ಹೀಗಾಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಹಾಗೂ ಪದವಿ ಪೂರ್ವ ಹಂತದ ಶಿಕ್ಷಣದ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಮತ್ತು ಎಲ್ಲ ಪಿಯು ಕಾಲೇಜುಗಳನ್ನು ಮರು ‘ಪದನಾಮೀಕರಣ’ಗೊಳಿಸುವಂತೆ ತಿಳಿಸಿದ್ದಾರೆ.
ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿ/ ಪಿಯು ಕಾಲೇಜುಗಳ ನಾಮಲಕದಲ್ಲಿ ತಕ್ಷಣವೇ ಬದಲಾಯಿಸುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಹಾಗೂ ಎಲ್ಲ ಪ್ರಾಂಶುಪಾಲರಿಗೆ ಇಲಾಖೆ ನಿರ್ದೇಶಕಿ ಸಿಂಧೂ ಬಿ, ರೂಪೇಶ್ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.