ದ್ವಿತೀಯ ಪಿಯು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಸೇವೆ

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಚಿತ ಬಸ್​ ಸೇವೆಯನ್ನು ಕಲ್ಪಿಸುವ ವ್ಯವಸ್ಥೆಯನ್ನು ಘೋಷಿಸಿದೆ.

ಮಾರ್ಚ್​ 1ರಿಂದ ಪಿಯು ಪರೀಕ್ಷೆಗಳು ಆರಂಭವಾಗಲಿದ್ದು, 18ರವರೆಗೂ ನಡೆಯಲಿವೆ. ಪರೀಕ್ಷೆಗಳು ಮುಗಿಯುವವರೆಗೂ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿರುವುದಾಗಿ ಕೆಎಸ್​ಆರ್​ಟಿಸಿ ಶುಕ್ರವಾರ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯ ಹಾಗೂ ಎಕ್ಸ್​​ಪ್ರೆಸ್​​ ಬಸ್​ಗಳಲ್ಲಿ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮನವಿ ಮೇರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. (ದಿಗ್ವಿಜಯ ನ್ಯೂಸ್​)