More

    ಜುಲೈ 8ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

    ಮೈಸೂರು: ಜುಲೈ 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

    ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್

    ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ. ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು.

    ಎಸ್ಎಸ್​ಎಲ್​ಸಿ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಜುಲೈ ಅಂತ್ಯದಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

    ಮೈಸೂರಿನಲ್ಲಿ 130, ಮಂಡ್ಯದಲ್ಲಿ 83 ಹಾಗೂ ಕೊಡಗಿನಲ್ಲಿ 27 ಪರೀಕ್ಷಾ ಕೇಂದ್ರಗಳಿವೆ. ಮೂರು ಜಿಲ್ಲೆಗಳಿಂದ ಒಟ್ಟು 248 ಪರೀಕ್ಷಾ ಕೇಂದ್ರಗಳಿವೆ. ಸುರಕ್ಷತೆ ಮತ್ತು ಆತ್ಮವಿಶ್ವಾಸ ನಮ್ಮ ಧ್ಯೇಯವಾಗಿದೆ. ಅದಕ್ಕಾಗಿ ಮನೆ ಮನೆಗಳಿಗೆ ತಲುಪುವ ಕೆಲಸ ಮಾಡುತ್ತಿದ್ದೇವೆ. ಕಲಿಕಾ ನಿರಂತರತೆ ಕಾಪಾಡಿಕೊಂಡಿದ್ದೇವೆ. ಈ ಕಾರಣಕ್ಕಾಗಿ ಪರೀಕ್ಷೆ ‌ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.

    ಇದನ್ನೂ ಓದಿ: ಈ ವರ್ಷದಿಂದಲೇ 1000 ಉಭಯ ಮಾಧ್ಯಮ ಶಾಲೆಗಳ ಪ್ರಾರಂಭ: ಸುರೇಶ್ ಕುಮಾರ್

    ಪರೀಕ್ಷೆ ನಡೆಸಲೇಬಾರದು ಎಂಬ ಅಭಿಪ್ರಾಯವಿದೆ. ಈ ಸಂಬಂಧ ಹೈಕೋರ್ಟ್‌ನಲ್ಲೂ ಪಿಎಎಲ್ ದಾಖಲಾಗಿತ್ತು. ಎಸ್‌ಎಸ್ಎಲ್‌ಸಿ ಜೀವನದ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆ ನಡೆಸಲೇಬೇಕಿದೆ ಎಂದು ಸುರೇಶ್​ ಕುಮಾರ್​ ಅವರು ತಿಳಿಸಿದರು. (ದಿಗ್ವಿಜಯ ನ್ಯೂಸ್​)

    ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದಾಗಲ್ಲ…. ಗೊಂದಲ ಮಾಡ್ಕೊಬೇಡಿ, ಚೆನ್ನಾಗಿ ಓದ್ಕೊಳಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts