18 C
Bangalore
Friday, December 6, 2019

ಕಾಡಿನಲ್ಲಿ ಸಂಚರಿಸಲು ‘ಯೋಧ’ ರೆಡಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಭಟ್ಕಳ: ಪಾಠ ಓದಿ ಆಟ ಆಡುವ ಬಾಲಕರು ಇವರು. ಆದರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಬೆರಗಾಗುವಂಥ ಹೊಸ ಮಾದರಿಯ ವಾಹನವನ್ನು ವಿನ್ಯಾಸ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಭಟ್ಕಳ ಆನಂದಾಶ್ರಮ ಪಿಯು ಕಾಲೇಜ್​ನ ಪ್ರಥಮ ವರ್ಷದಲ್ಲಿ ಓದುತ್ತಿರುವ ದರ್ಶನ ನಾಯ್ಕ, ಅಹ್ಮದ್ ರಜಾ, ತಯ್ಯಬ್ ಮೋಮಿನ್ ಅವರು ಈ ವಾಹನ ರೂಪಿಸಿದ್ದಾರೆ. ಕಾಡಿನಲ್ಲಿ ಸಂಚರಿಸುವವರಿಗೆ, ವಿಶೇಷವಾಗಿ ಯೋಧರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಸಿರು ಬಣ್ಣದಲ್ಲಿ ವಿನ್ಯಾಸ ಮಾಡಿದ್ದು, ಮೆಟಲ್ ಡಿಟೆಕ್ಟರ್ ಕೂಡ ಇದರಲ್ಲಿ ಅಳವಡಿಸಿದ್ದಾರೆೆ. ಇಬ್ಬರು ಪ್ರಯಾಣಿಸಬಹುದಾದ ಈ ಪುಟ್ಟ ಕಾರಿನ ಹಿಂದೆ ಅಗತ್ಯ ವಸ್ತುಗಳನ್ನು ಇಡಲು ಸ್ಥಳವಕಾಶವನ್ನು ಕೂಡ ಕಲ್ಪಿಸಲಾಗಿದೆ.

ಕಾರಿನ ತಯಾರಿ ಹೇಗೆ ಆಯಿತು?

ಗುಜರಿಯಿಂದ ಆಯ್ದ ವಸ್ತುಗಳನ್ನು ಪಡೆದು ಕಾರಿನ ಪ್ಲಾಟ್​ಫಾರ್ಮ ನಿರ್ವಿುಸಲಾಗಿದೆ. ಹಳೆಯ ಹೀರೊ ಹೊಂಡಾ ಸ್ಟ್ರೀಟ್ ಬೈಕ್​ನ ಇಂಜಿನ್, ರಿಕ್ಷಾಗಳ ಚಕ್ರಗಳನ್ನು ಬಳಸಲಾಗಿದೆ. ತಮ್ಮ ಸಾಮಾನ್ಯ ತಿಳಿವಳಿಕೆಯಿಂದ ಕಾರಿನ ಒಳವಿನ್ಯಾಸ ರಚಿಸಿದ್ದಾರೆ. ಸ್ಟೇರಿಂಗ್, ಬಂಪರ್, ಕ್ಲಚ್ ಸೇರಿ ಎಲ್ಲವೂ ಇಲ್ಲಿ ಕೊಂಚ ವಿಭಿನ್ನ ಮಾದರಿಯಲ್ಲಿವೆ. ವಿಶೇಷವೆಂದರೆ, ಮೆಟಲ್ ಡಿಟೆಕ್ಟರ್ ಅಳವಡಿಸಿದ್ದರೆ. ಯಾವುದಾದರೂ ಕಬ್ಬಿಣದ ವಸ್ತುಗಳು, ನೆಲಬಾಂಬ್ ಇದ್ದರೆ ಸೈರನ್ ಬಾರಿಸುವ ವ್ಯವಸ್ಥೆ ಇದರಲ್ಲಿದೆ. ಇದೆಲ್ಲವನ್ನು ಸಿದ್ಧಪಡಿಸಲು ವ್ಯಯಿಸಿದ್ದು ಕೇವಲ 30 ಸಾವಿರ ರೂಪಾಯಿ ಎನ್ನುತ್ತಾರೆ ತಯ್ಯಬ್ ಮೋಮಿನ.

ಮೆಚ್ಚುಗೆ ಗಳಿಸಿದೆ ಪ್ರದರ್ಶನ:

ಭಟ್ಕಳದ ಅಂಜುಮನ್ ತಾಂತ್ರಿಕ ಕಾಲೇಜ್​ನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿಜ್ಞಾನ ಪ್ರದರ್ಶನದಲ್ಲಿ ಸ್ಟೆಮ್ 18 ಫೆಸ್ಟ್​ನಲ್ಲಿ ಈ ವಿದ್ಯಾರ್ಥಿಗಳ ಪ್ರದರ್ಶನ ಮೆಚ್ಚುಗೆ ಪಡೆದಿದೆ. ಮಾತ್ರವಲ್ಲ, ಉಡುಪಿ ಜಿಲ್ಲೆಯ ಗ್ರೀನ್ ವ್ಯಾಲಿಯ ಶಾಲೆಯ ಪ್ರದರ್ಶನಕ್ಕೂ ಆಹ್ವಾನ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಮುಂದೊಂದು ದಿನ ಇದನ್ನು ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ, ಸೈನ್ಯಕ್ಕೆ ನೀಡುವ ಇಚ್ಛೆ ಹೊಂದಿದ್ದಾರೆ.

 

ಚಿಕ್ಕಂದಿನಿಂದಲೇ ಏನಾದರೂ ಹೊಸತನ್ನು ಮಾಡುವ ಬಯಕೆಯಿತ್ತು. ಮೂವರು ಗೆಳೆಯರು ಸೇರಿ ಸೇನೆಗಾಗಿ ‘ಯೋಧ’ನ ನಿರ್ವಿುಸುವ ಯೋಜನೆ ರೂಪಿಸಿದೆವು. ನಮ್ಮ ತಿಳಿವಳಿಕೆಯಿಂದಲೇ ಯೋಧ ವಾಹನ ನಿರ್ವಿುಸಿದೇವು. ಶಿಕ್ಷಕರು, ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪೆಟ್ರೋಲ್ ಇಂಜಿನ್ ಹೊಂದಿರುವ ನಮ್ಮ ವಾಹನವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ.

| ದರ್ಶನ ನಾಯ್ಕ

ಆನಂದಾಶ್ರಮ ಪಿಯು ಕಾಲೇಜ್ ಪ್ರಥಮ ವರ್ಷದ ವಿದ್ಯಾರ್ಥಿ

 

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...