More

    ಸಾರ್ವಜನಿಕರೊಂದಿಗೆ ಉತ್ತಮವಾಗಿ ನಡೆದುಕೊಳ್ಳಿ, ಡಿಸಿ ಎಂ.ಸುಂದರೇಶ ಬಾಬು ಸಲಹೆ

    ಕೊಪ್ಪಳ: ಗ್ರಾಮ ಆಡಳಿತಾಧಿಕಾರಿಗಳು ವೃತ್ತಿಯಲ್ಲಿ ಜನರೊಂದಿಗೆ ಉತ್ತಮವಾಗಿ ನಡೆದುಕೊಂಡು ಸೇವೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು.

    ನಗರದ ವಿಜ್ಞಾನ ಭವನದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ವೃತ್ತಿ ಬುನಾದಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

    ಇದನ್ನೂ ಓದಿ: ಗ್ರಾಮಾಡಳಿತ ನೀರು ಬಳಕೆಯ ಜಾಗೃತಿ ಮೂಡಿಸಲಿ- ಜೆಜೆಎಂ ಮುಖ್ಯಸಲಹೆಗಾರ ಡಾ.ಜಿ.ಅಚ್ಯುತರಾವ್ ಸಲಹೆ

    ಗ್ರಾಮಾಡಳಿತ ಅಧಿಕಾರಿಗಳು ಹೆಚ್ಚಿನ ಸೇವಾ ಅವಧಿಯನ್ನು ಕಂದಾಯ ಇಲಾಖೆಯಲ್ಲಿ ಸಲ್ಲಿಸುತ್ತಾರೆ. ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಇಟ್ಟುಕೊಳ್ಳಲು ಕಂದಾಯ ಇಲಾಖೆ ಅವಕಾಶ ಒದಗಿಸುತ್ತದೆ. ಇಲಾಖೆಯ ಸೇವೆ, ನೀತಿ-ನಿಯಮಗಳ ಬಗ್ಗೆ ತಿಳಿದುಕೊಂಡಾಗ ಉತ್ತಮ ಆಡಳಿತ ನೀಡಲು ಸಾಧ್ಯ ಎಂದರು.

    ಪ್ರತಿಯೊಂದು ಗ್ರಾಮದ ಭೌಗೋಳಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಷಯಗಳನ್ನು ಅರಿತು, ಸಮಯ ಪರಿಪಾಲನೆ ಮಾಡಬೇಕು. ಯಾವುದೇ ಲೋಪವಾಗದಂತೆ ಕಚೇರಿ ಕಾರ್ಯ ನಿರ್ವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ, ಕುಟುಂಬದವರಿಗೂ ಸಮಯ ಕೊಡುವಂತೆ ಸಲಹೆ ನೀಡಿದರು.

    ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರಮಾಣ ಪತ್ರ ವಿತರಿಸಿದರು. ಬಳಿಕ ಪ್ರಶಿಕ್ಷಣಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಡಿಡಿಪಿಐ ಎಂ.ಎ.ರಡ್ಡೇರ, ಕೊಪ್ಪಳ ಗ್ರೇಡ್-2 ತಹಸೀಲ್ದಾರ್ ಗವಿಸಿದ್ದಪ್ಪ ಮಣ್ಣೂರು, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಮ್ಯಾಗಳಮನಿ, ಸಂಪನ್ಮೂಲ ವ್ಯಕ್ತಿಗಳಾದ ಅಡಿವೆಪ್ಪ ಮತ್ತೂರು, ಲಾಯಕ್ ಅಲಿ, ಜಿಲ್ಲಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಯುನೆಸೆಫ್ ಸಂಯೋಜಕ ಹರೀಶ್ ಜೋಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts