More

    ಕುಡಿವ ನೀರಿನ ಘಟಕ ಆರಂಭಿಸಿದ ಸಿಇಒ

    ಯಾದಗಿರಿ: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿರುವ ಬಗ್ಗೆ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶಮರ್ಾ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಜಿನಕೇರಾ, ಸೈದಾಪುರ, ದೇವರಹಳ್ಳಿ, ಗಾಜರಕೋಟ ಮೊದಲಾದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಾನಾ ಕಾರಣಗಳಿಂದ ಸ್ಥಗಿತಗೊಂಡಿವೆ. ಈ ಎಲ್ಲ ಕಡೆ ಭೇಟಿ ನೀಡಿದ ಸಿಇಒ, ಅದೇ ದಿನವೇ ಘಟಕಗಳು ಆರಂಭವಾಗುವಂತೆ ಕ್ರಮ ಕೈಗೊಂಡು ಹಳ್ಳಿಗರ ನೀರಿನ ಸಮಸ್ಯೆಗೆ ಸ್ಪಂದಿಸಿದ್ದಾರೆ.

    ಇಡೀ ವಿಶ್ವವನ್ನು ಬಾಧಿಸುತ್ತಿರುವ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಗ್ರಾಪಂಗಳಲ್ಲಿ ಸರ್ಕಾರದ ನಿರ್ದೇಶನದಂತೆ ರಚಿಸಿದ ಟಾಸ್ಕ್ ಫೋರ್ಸ್​ ಸಮಿತಿಗಳ ಮೂಲಕ ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಪ್ರತಿದಿನ ರಾಜ್ಯ ಮಟ್ಟದಿಂದ ನಡೆಯುವ ವೀಡಿಯೊ ಸಂವಾದ ಸಭೆಗಳಿಗೆ ಹಾಜರಾಗಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕರೊನಾ ನಿಯಂತ್ರಣ ಕಾರ್ಯದ ಜತೆಗೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಗ್ರಾಪಂ ಪಿಡಿಒ ಸೇರಿ ತಾಪಂ ಅಧಿಕಾರಿಗಳು ಶ್ರಮಿಸಬೇಕು. ಗ್ರಾಮೀಣ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದ ಶಿಲ್ಪಾ ಶರ್ಮಾ, ನಾಗರಿಕರು ಕರೊನಾ ಹರಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮುಖ್ಯವಾಗಿ ಆಗಾಗ್ಗೆ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳುವುದನ್ನು ಮಾಡಬಾರದು. ಕರೊನಾ ಬಗ್ಗೆ ಭಯಪಡದೆ ಸಕರ್ಾರ ವಿಧಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಕಿವಿಮಾತು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts