ಸಿಎಂಗೆ ಸಾರ್ವಜನಿಕರ ಅಹವಾಲು

Siddaramaiah
Published on

ಮೈಸೂರು: ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಶನಿವಾರ ನೂರಾರು ಸಾರ್ವಜನಿಕರು ಅಹವಾಲು ಸಲ್ಲಿಸಿದರು.

ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ್ದ ಜಿಲ್ಲೆಯ ನಾನಾ ಭಾಗಗಳಿಂದ ಬಂದಿದ್ದ ಸಾರ್ವಜನಿಕರು ಉದ್ಯೋಗ, ಹಣಕಾಸಿನ ನೆರವು, ಆಶ್ರಯ ಮನೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದರು. ಜತೆಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತು ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಜತೆಗೆ ನಿಗಮ, ಮಂಡಳಿಗೆ ನೇಮಕ ಮಾಡುವಂತೆ ಲಾಬಿ ನಡೆಸಿದರು.
ವಿಶೇಷ ಉಡುಗೊರೆ: ಈ ವೇಳೆ ವರುಣ ಕ್ಷೇತ್ರದ ಚುಂಚನಹಳ್ಳಿ ಗ್ರಾಮದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಗಜ್ಯೋತಿ ಬಸವಣ್ಣನ ಭಾವಚಿತ್ರ ಉಡುಗೊರೆಯಾಗಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net