More

    ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ

    ವಿಜಯನಗರ: ರಾಜ್ಯಾದ್ಯಂತ ಕರೊನಾ ಪ್ರಕರಣ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಎಲ್ಲವೂ ನಿಧಾನವಾಗಿ ಸಹಜಸ್ಥಿತಿಗೆ ಬರುತ್ತಿದೆ ಎಂದು ಸಾರ್ವಜನಿಕರು ನಿರಾಳರಾಗುತ್ತಿದ್ದಾರೆ. ಆದರೆ ಈ ನಡುವೆ ಕೊಟ್ಟೂರೇಶ್ವರ ಭಕ್ತಾದಿಗಳಿಗೆ ಬೇಸರ ಮೂಡಿಸುವ ಸಂಗತಿಯೊಂದು ಹೊರಬಿದ್ದಿದೆ.

    ವಿಜಯನಗರ ಜಿಲ್ಲೆಯ ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ಪ್ರತಿವರ್ಷ ಲಕ್ಷಾಂತರ ಜನ ಪಾಲ್ಗೊಳ್ಳುವ ಮೂಲಕ ಅದ್ಧೂರಿಯಾಗಿ ನಡೆಯುತ್ತದೆ. ಊರ-ಪರವೂರಿನ ಮಾತ್ರವಲ್ಲದೆ ನೆರೆರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಈ ಸಲ ಕರೊನಾ ಸೋಂಕು ಹಬ್ಬುವ ಭೀತಿಯಿಂದ ಈ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

    ಫೆ‌.23ರಿಂದ ಫೆ.26ರವರೆಗೆ ಈ ಸಲ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿವರ್ಷ ಇದರಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಇಷ್ಟೊಂದು ಭಕ್ತರು ಆಗಮಿಸುವಾಗ ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟ. ಇದರಿಂದ ಸೋಂಕು ಮತ್ತೆ ವ್ಯಾಪಿಸುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬಾರದು ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್​ ಪಿ. ಶ್ರವಣ್ ಆದೇಶ ಹೊರಡಿಸಿದ್ದಾರೆ.

    ಪಕ್ಕದ ಮನೆಯವಳನ್ನು ಮಚ್ಚಿನಿಂದ ಹೊಡೆದು ಕೊಂದ; ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts